TSK

TSK · ಯೆರೆಮಿಯ 10:13

مراجع Treasury of Scripture Knowledge في ಕನ್ನಡ IRV.

العودة إلى المقطع

ಮೋಶೆಯು ತನ್ನ ಕೋಲನ್ನು ಆಕಾಶದ ಕಡೆಗೆ ಚಾಚಿದಾಗ ಯೆಹೋವನು ಗುಡುಗನ್ನು, ಆನೆಕಲ್ಲಿನ ಮಳೆಯನ್ನು ಕಳುಹಿಸಿದನು. ಸಿಡಿಲುಗಳು ನೆಲಕ್ಕೆ ಅಪ್ಪಳಿಸಿದವು. ಯೆಹೋವನು ಐಗುಪ್ತ ದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು.

¶ ಅನಂತರ ಅವನು ಅಹಾಬನಿಗೆ, “ನೀನು ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೋ, ದೊಡ್ಡ ಮಳೆಯ ಶಬ್ದವು ಕೇಳಿಸುತ್ತದೆ” ಅಂದನು.

ನೀರಿನ ಹನಿಗಳನ್ನು ಎಳೆದುಕೊಳ್ಳುವನು, ಅವು ತಿಳಿಮಳೆಯಾಗಿ ಆತನ ಮಂಜಿನಿಂದ ಉದುರುವವು.

ನಾನು ಇಕ್ಕಟ್ಟಿನ ಕಾಲಕ್ಕಾಗಿಯೂ, ಯುದ್ಧಕದನಗಳ ದಿನಕ್ಕಾಗಿಯೂ ಇಟ್ಟುಕೊಂಡಿರುವ,

ಹಾಳುಬೀಳಾದ ಭೂಮಿಯನ್ನು ತೃಪ್ತಿಪಡಿಸಿ, ಹಸಿ ಹುಲ್ಲನ್ನು ಬೆಳೆಯಿಸಬೇಕೆಂದು,

ಯೆಹೋವನು ಆಕಾಶದಲ್ಲಿ ಗುಡುಗಿದನು; ಪರಾತ್ಪರನಾದ ದೇವರು ಧ್ವನಿಗೊಟ್ಟನು. ಕಲ್ಮಳೆಯೂ, ಉರಿಗೆಂಡಗಳೂ ಹೊರಟವು.

ಅನಾದಿಕಾಲದಿಂದಿರುವ ಮಹೋನ್ನತಾಕಾಶದಲ್ಲಿ ವಾಹನಾರೂಢನಾಗಿ ಇರುವಾತನನ್ನು ಸ್ತುತಿಸಿರಿ. ಕೇಳಿರಿ; ಆತನ ಗರ್ಜನೆಯು ಮಹಾಘೋರವಾದದ್ದು.

ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ; ಮಳೆಗೋಸ್ಕರ ಮಿಂಚನ್ನು ಹೊಳೆಯುವಂತೆ ಮಾಡುತ್ತಾನೆ; ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ.

ಆತನು ಆಕಾಶದಲ್ಲಿ ಮೋಡಗಳನ್ನು ಕವಿಸುತ್ತಾನೆ, ಭೂಮಿಗೋಸ್ಕರ ಮಳೆಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.

ಜನಾಂಗಗಳ ವ್ಯರ್ಥವಾದ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವನೇ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು. ನೀನು ಇವುಗಳನ್ನೆಲ್ಲಾ ನಡೆಸುವವನಾಗಿದ್ದೀಯಷ್ಟೆ.

ಇಗೋ, ಪರ್ವತಗಳನ್ನು ರೂಪಿಸಿ, ಗಾಳಿಯನ್ನು ನಿರ್ಮಿಸಿ, ತನ್ನ ಸಂಕಲ್ಪವನ್ನು ಮನುಷ್ಯರಿಗೆ ವ್ಯಕ್ತಗೊಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ ಮತ್ತು ಭೂಮಿಯ ಉನ್ನತ ಪ್ರದೇಶಗಳನ್ನು ತುಳಿದುಬಿಡುವಾತನು” ಸೇನಾಧೀಶ್ವರ ದೇವರಾದ ಯೆಹೋವನೆಂಬುದೇ ನನ್ನ ನಾಮಧೇಯ.