TSK

TSK · ಯೆರೆಮಿಯ 11:21

مراجع Treasury of Scripture Knowledge في ಕನ್ನಡ IRV.

العودة إلى المقطع

ಇವರು ದಿವ್ಯದರ್ಶಿಗಳಿಗೆ, “ನಿಮಗೆ ದರ್ಶನವಾಗದಿರಲಿ” ಎನ್ನುತ್ತಾರೆ, ಮತ್ತು ಪ್ರವಾದಿಗಳಿಗೆ, “ನಮಗಾಗಿ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮೋಸವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.

ಇಂತೆನ್ನುವ ಯೆಹೋವನು ನನಗೆ, “ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿದ್ದರೆ ಕುದುರೆಗಳೊಂದಿಗೆ ಓಡಿ ಹೇಗೆ ಮುಂದಾಗುವಿ? ಅಪಾಯವಿಲ್ಲದ ದೇಶದಲ್ಲಿ ನೀನು ನಿರ್ಭಯವಾಗಿದ್ದರೂ ಯೊರ್ದನಿನ ದಟ್ಟಡವಿಯಲ್ಲಿ ಏನು ಮಾಡುವಿ?

¶ ಯೆರೆಮೀಯನು ಈ ಪ್ರವಾದನೆ ಮಾಡುವುದನ್ನು ಯಾಜಕನಾದ ಇಮ್ಮೇರನ ಮಗನೂ ಯೆಹೋವನ ಆಲಯದ ಮುಖ್ಯಾಧಿಕಾರಿಯೂ ಆದ ಪಷ್ಹೂರನು ಕೇಳಿದನು.

ಸಮಸ್ತಜನರಿಗೆ ಹೇಳಬೇಕೆಂದು ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಯೆರೆಮೀಯನು ಹೇಳಿ ಮುಗಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ ಎಲ್ಲಾ ಜನರೂ ಅವನನ್ನು ಹಿಡಿದು, “ನೀನು ಸಾಯಲೇಬೇಕು!

“ಆದರೆ ನೀವೋ ಪ್ರತಿಷ್ಠಿತರಿಗೆ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟಿರಿ ಮತ್ತು ಪ್ರವಾದಿಗಳಿಗೆ ಪ್ರವಾದಿಸಬೇಡಿರೆಂದು ಆಜ್ಞಾಪಿಸಿದ್ದಿರಿ.

ಆಹಾ, ಆ ಕೆಡುಕರು “ಪ್ರವಾದನೆ ಮಾಡಬೇಡಿರಿ. ಇಂಥ ವಿಷಯಗಳಲ್ಲಿ ಪ್ರವಾದನೆಯನ್ನು ಎತ್ತಬಾರದು, ದೂಷಣೆಗಳು ತೊಲಗುವುದೇ ಇಲ್ಲ” ಎಂದು ಪ್ರವಾದನೆ ಮಾಡುತ್ತಾರೆ.

‹ಇದಲ್ಲದೆ ಸಹೋದರನು ಸಹೋದರನನ್ನು, ತಂದೆಯು ಮಗನನ್ನು, ಮರಣಕ್ಕೆ ಒಪ್ಪಿಸುವರು; ಮಕ್ಕಳು ತಂದೆತಾಯಿಗಳ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.›

‹ತೋಟಗಾರರು ಅವನ ಆಳುಗಳನ್ನು ಹಿಡಿದು ಒಬ್ಬನನ್ನು ಹೊಡೆದರು, ಮತ್ತೊಬ್ಬನನ್ನು ಕಡಿದು ಹಾಕಿದರು, ಇನ್ನೊಬ್ಬನನ್ನು ಕಲ್ಲೆಸೆದು ಕೊಂದರು.›

‹ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.›

‹ಹೇಗೂ ನಾನು ಈ ಹೊತ್ತು ನಾಳೆ ನಾಡಿದ್ದು ಸಂಚಾರ ಮಾಡಬೇಕು. ಪ್ರವಾದಿಯಾದವನು ಯೆರೂಸಲೇಮಿನಲ್ಲಿಯೇ ಹೊರತು ಬೇರೆ ಪಟ್ಟಣದಲ್ಲಿ ಕೊಲ್ಲಲ್ಪಡಕೂಡದಷ್ಟೆ.›