TSK

TSK · ಯೆರೆಮಿಯ 13:10

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯೆಹೋವನು ಮೋಶೆಗೆ, “ಈ ಜನರು ಇನ್ನು ಎಷ್ಟರವರೆಗೆ ನನ್ನನ್ನು ಅಲಕ್ಷ್ಯಮಾಡುವರು? ನಾನು ನಡೆಸಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನು ಎಷ್ಟು ದಿನ ನನ್ನನ್ನು ನಂಬದೆ ಇರುವರು?

ನನ್ನ ಮಹತ್ಕಾರ್ಯಗಳನ್ನು ಮರೆಯದೆ, ನನ್ನಲ್ಲಿಯೇ ಭರವಸೆಯಿಟ್ಟು, ನನ್ನ ಆಜ್ಞೆಗಳನ್ನು ಕೈಗೊಳ್ಳುವರು” ಎಂಬುದೇ.

ಆಗ ಸುಗಂಧದ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ, ಅಂದವಾದ ಜಡೆಯ ಬದಲಾಗಿ ಬೋಳುತಲೆ, ನಡುವಿನ ಶಲ್ಯಕ್ಕೆ ಬದಲಾಗಿ ಗೋಣಿತಟ್ಟು, ಸೌಂದರ್ಯಕ್ಕೆ ಬದಲಾಗಿ ಕುರೂಪ, ಬೆತ್ತಲೆ ಉಂಟಾಗುವುದು.

ಈ ಜನರ ಹೃದಯವೋ ನನ್ನ ಅಧೀನ ತಪ್ಪಿ ತಿರುಗಿಬಿದ್ದಿದೆ; ಇವರು ನನ್ನ ಅಧೀನವನ್ನು ಮೀರಿ ಬಿಟ್ಟುಹೋಗಿದ್ದಾರೆ.

ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದುವರಿಯಲಿಲ್ಲ.

ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು, “ನಾನು ಇವರ ಕಣ್ಣೆದುರಿಗೇ ಇಟ್ಟಿರುವ ಧರ್ಮೋಪದೇಶವನ್ನು ಇವರು ಲಕ್ಷ್ಯಕ್ಕೆ ತಾರದೆ, ನನ್ನ ಮಾತನ್ನು ಕೇಳದೆ ಹೋದರು.

ನಿಮ್ಮ ಪೂರ್ವಿಕರನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ, ನನ್ನ ಮಾತನ್ನು ಕೇಳಿರಿ ಎಂದು ತಡ ಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದೆನಷ್ಟೆ.

ನಾನು ಯೂಫ್ರೆಟಿಸ್ ನದಿಗೆ ಹೋಗಿ ಅಗೆದು, ನಾನು ಬಚ್ಚಿಟ್ಟ ಸ್ಥಳದೊಳಗಿಂದ ನಡುಕಟ್ಟನ್ನು ತೆಗೆದೆನು, ಆಹಾ, ಅದು ಕೆಟ್ಟು ಯಾವ ಕೆಲಸಕ್ಕೂ ಬಾರದ್ದಾಗಿತ್ತು.

ಅವರು ಘೋರವಾದ ಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಹೂಣಿಡುವುದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು. ಖಡ್ಗವೂ, ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವಾಗುವವು” ಎಂಬುದೇ.

¶ ಆತನು, “ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿನದವರೆಗೆ, ಇಪ್ಪತ್ತಮೂರು ವರ್ಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ; ಅದನ್ನು ನಿಮಗೆ ಪ್ರಕಟಿಸುತ್ತಲೇ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.

¶ “ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.

ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?