¶ ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವುದೇನೆಂದರೆ, ‘ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವುದು ಇನ್ನು ಎಲ್ಲಿಯವರೆಗೆ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.
TSK
TSK · ಯೆರೆಮಿಯ 13:18
مراجع Treasury of Scripture Knowledge في ಕನ್ನಡ IRV.
ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀನನನ್ನೂ, ಅವನ ತಾಯಿ, ಹೆಂಡತಿ, ಕಂಚುಕಿಗಳನ್ನೂ ಮತ್ತು ದೇಶದ ಪ್ರಧಾನ ಪುರುಷರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಯಾಗಿ ತೆಗೆದುಕೊಂಡುಹೋದನು.
ಅವನ ದೇವರಿಗೆ ಮಾಡಿದ ಪ್ರಾರ್ಥನೆಯೂ, ಅವನಿಗೆ ದೊರಕಿದ ಸದುತ್ತರವೂ, ಅವನು ತನ್ನನ್ನು ತಗ್ಗಿಸಿಕೊಳ್ಳುವುದಕ್ಕಿಂತ ಮೊದಲು ಮಾಡಿದ ಅಪರಾಧದ್ರೋಹಗಳೂ, ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ನಿರ್ಮಿಸಿ ಅಶೇರ ಸ್ತಂಭ ವಿಗ್ರಹ ಇವುಗಳನ್ನು ನಿಲ್ಲಿಸಿದ್ದೂ ದರ್ಶಕರ ಚರಿತ್ರೆಯಲ್ಲಿ ಬರೆದಿರುತ್ತವೆ.
ಅವಳ ಪುರದ್ವಾರಗಳಲ್ಲಿ ಪ್ರಲಾಪವೂ, ದುಃಖವೂ ತುಂಬಿರುವವು. ಅವಳು ಹಾಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು.
¶ ಯೆಹೋವನು ಹೀಗೆನ್ನುತ್ತಾನೆ, “ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಕೊನ್ಯನೆಂಬ ನೀನು ನನ್ನ ಬಲಗೈಯ ಮುದ್ರೆಯುಂಗರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುತ್ತಿದ್ದೆನು!
ಚೀಯೋನ್ ನಗರಿಯ ಹಿರಿಯರು ನೆಲದಲ್ಲಿ ಮೌನವಾಗಿ ಕುಕ್ಕರಿಸಿದ್ದಾರೆ; ತಲೆಯ ಮೇಲೆ ಧೂಳನ್ನು ತೂರಿಕೊಂಡು, ಗೋಣಿ ತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇಮಿನ ಕನ್ಯೆಯರು ತಲೆಗಳನ್ನು ನೆಲಕ್ಕೆ ಬೊಗ್ಗಿಸಿದ್ದಾರೆ.
¶ ಆ ಸುದ್ದಿಯು ನಿನೆವೆಯ ಅರಸನಿಗೆ ತಿಳಿಯಲು ಅವನು ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡನು.
ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗ ಆತನು ನಿಮ್ಮನ್ನು ಮೇಲಕ್ಕೆತ್ತುವನು.