¶ ಆಗ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನೀನು ಈ ಜನರಿಗೂ ಮತ್ತು ಯೆರೂಸಲೇಮಿಗೂ, ‘ನಿಮಗೆ ಸಮಾಧಾನವಾಗುವುದು’ ಎಂದು ಹೇಳಿ ನಿಶ್ಚಯವಾಗಿ ಇವರನ್ನು ಬಹಳ ಮೋಸಗೊಳಿಸಿದ್ದಿ; ಖಡ್ಗವು ಪ್ರಾಣದ ಮಟ್ಟಿಗೂ ಇಳಿಯುತ್ತದಲ್ಲಾ” ಅಂದೆನು.
TSK
TSK · ಯೆರೆಮಿಯ 14:13
مراجع Treasury of Scripture Knowledge في ಕನ್ನಡ IRV.
ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?
ಸಮಾಧಾನವಿಲ್ಲದ್ದಿದ್ದರೂ, ‘ಸಮಾಧಾನ’ ಎಂದು ಹೇಳಿ ನನ್ನ ಪ್ರಜೆಯೆಂಬಾಕೆಯ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.
ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂಬುದಾಗಿ ಯೆಹೋವನು ನುಡಿದಿದ್ದಾನೆ’ ಎಂದು ಹೇಳುತ್ತಲೇ ಇದ್ದಾರೆ. ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.
ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬರುವುದಿಲ್ಲ ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?
ನಾನು ಎದೆಗುಂದಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ, ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.
¶ ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.