TSK

TSK · ಯೆರೆಮಿಯ 16:21

مراجع Treasury of Scripture Knowledge في ಕನ್ನಡ IRV.

العودة إلى المقطع

ಈ ಸಾರಿ ನಾನು ನನ್ನ ವಶದಲ್ಲಿರುವ ಈ ಬಾಧೆಗಳನ್ನು ನಿನ್ನ ಪ್ರಜಾಪರಿವಾರದವರಿಗೆ ಉಂಟಾಗುವಂತೆಯೂ, ನಿನ್ನ ಹೃದಯಕ್ಕೂ ತಗಲುವಂತೆಯೂ ಮಾಡುವೆನು. ಆದುದರಿಂದ ಸಮಸ್ತ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನನ್ನ ವಿಷಯದಲ್ಲಿ ತಿಳಿದುಕೊಳ್ಳುವಿ.

ಆಗ ಯೆಹೋವನ ನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.

“ಕಾರ್ಯವನ್ನು ಸಾಧಿಸಿಕೊಳ್ಳುವ, ಉದ್ದೇಶಿಸಿ ನೆರವೇರಿಸುವ ಯೆಹೋವನಾಮಾಂಕಿತನು ಇಂತೆನ್ನುತ್ತಾನೆ,

ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾಗಿರುವನು; ಅವನು ಮಾಡಿದಂತೆಯೇ ಎಲ್ಲವನ್ನು ನೀವು ಮಾಡುವಿರಿ; ಇದು ಸಂಭವಿಸುವಾಗ ನಾನೇ ಕರ್ತನಾದ ಯೆಹೋವನು ಎಂದು ನಿಮಗೆ ಗೊತ್ತಾಗುವುದು.’”

ನಾನು ಎದೋಮಿಗೆ ನನ್ನ ಜನರಾದ ಇಸ್ರಾಯೇಲರ ಕೈಯಿಂದ ಮುಯ್ಯಿ ತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತಿಕಾರವು ಎದೋಮಿನ ಅನುಭವಕ್ಕೆ ಬರುವುದು” ಇದು ಕರ್ತನಾದ ಯೆಹೋವನ ನುಡಿ.