ಅವನ ಜನರು ಯೆರೂಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲಾ ರಾಜಮಂದಿರಗಳನ್ನೂ, ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿ; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.
TSK
TSK · ಯೆರೆಮಿಯ 21:14
مراجع Treasury of Scripture Knowledge في ಕನ್ನಡ IRV.
ಬಾಯಿಯ ಫಲವಾಗಿ ಮನುಷ್ಯನು ಬೇಕಾದಷ್ಟು ಸುಖವನ್ನು ಅನುಭವಿಸುವನು, ಅವನ ಕೈಕೆಲಸದ ಫಲವು ಅವನಿಗೆ ಪ್ರಾಪ್ತವಾಗುವುದು.
¶ ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.”
¶ ಆ ದಿನದಲ್ಲಿ ಯೆಹೋವನು ಆಕಾಶಮಂಡಲದ ದೂತಸೈನ್ಯವನ್ನೂ, ಭೂಮಂಡಲದ ಒಡೆಯರನ್ನೂ ದಂಡಿಸುವನು.
ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, ‘ನನ್ನ ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು ವೃಕ್ಷಗಳನ್ನೂ, ಶ್ರೇಷ್ಠವಾದ ತುರಾಯಿ ಮರಗಳನ್ನೂ ಕಡಿದು ಬಿಟ್ಟಿದ್ದೇನೆ; ಅಲ್ಲಿನ ಬಹುದೂರದ ಶಿಖರವನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.
ತಿದಿಯು (ಶ್ವಾಸಕೋಶ) ಬುಸುಬುಸುಗುಟ್ಟುತ್ತದೆ, ಸೀಸವು ಉರಿಯಿಂದ ಸುಟ್ಟುಹೋಗುತ್ತದೆ. ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ನಿಷ್ಪ್ರಯೋಜನ, ಕಲ್ಮಷವು ತೆಗೆಯಲ್ಪಡುವುದಿಲ್ಲ.
ಇಗೋ, ಅವರನ್ನು ದಂಡಿಸುವೆನು, ಯೌವನಸ್ಥರು ಖಡ್ಗದಿಂದ ನಾಶವಾಗುವರು. ಅವರ ಗಂಡು ಮತ್ತು ಹೆಣ್ಣುಮಕ್ಕಳು ಕ್ಷಾಮದಿಂದ ಸಾಯುವರು.
ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ’” ಎಂದು ಹೇಳಿದನು.
ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಪ್ರತಿಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ.
“ನರಪುತ್ರನೇ, ನೀನು ದಕ್ಷಿಣಾಭಿಮುಖನಾಗಿ ಆ ಕಡೆಗೆ ಮಾತನಾಡುತ್ತಾ ದಕ್ಷಿಣ ಸೀಮೆಯ ವನದ ಪ್ರಸ್ತಾಪವನ್ನೆತ್ತಿ,
ಆದರೆ ಅಷ್ಟರೊಳಗೆ ಈ ದೇಶವು ತನ್ನ ನಿವಾಸಿಗಳ ನಿಮಿತ್ತ ಅವರ ದುಷ್ಕೃತ್ಯಗಳ ಫಲವಾಗಿ ಹಾಳುಬಿದ್ದಿರುವುದು.
ಮೋಸಹೋಗಬೇಡಿರಿ. ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.