TSK

TSK · ಯೆರೆಮಿಯ 21:5

مراجع Treasury of Scripture Knowledge في ಕನ್ನಡ IRV.

العودة إلى المقطع

ನಾನು ಕೈಯನ್ನೆತ್ತಿ ನಿನ್ನನ್ನೂ, ನಿನ್ನ ಪ್ರಜೆಗಳನ್ನೂ, ವ್ಯಾಧಿಯಿಂದ ಬಾಧಿಸುವೆನು. ನಿನ್ನನ್ನು ಭೂಮಿಯೊಳಗಿಂದ ನಿರ್ಮೂಲ ಮಾಡುವೆನು.

ಬೇರೆ ಯಾವ ದೇವರೂ ಮನಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ, ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವುದಕ್ಕೆ ಪ್ರಯತ್ನಿಸಿದ್ದಾನೇ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣು ಮುಂದೆ ನಡಿಸಿದ್ದಾನಲ್ಲಾ.

ಅವರ ಮುಂದೆ ಪೂರ್ವದಿಂದ ಅರಾಮ್ಯರನ್ನು ಮತ್ತು ಅವರ ಹಿಂದೆ ಪಶ್ಚಿಮದಿಂದ ಫಿಲಿಷ್ಟಿಯರನ್ನು ಒಟ್ಟುಗೂಡಿಸುವನು. ಇವರು ಇಸ್ರಾಯೇಲರನ್ನು ಬಾಯಿದೆರೆದು ನುಂಗುವರು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.

ಮನಸ್ಸೆಯು ಎಫ್ರಾಯೀಮನ್ನು, ಎಫ್ರಾಯೀಮ ಮನಸ್ಸೆಯನ್ನು ತಿಂದುಬಿಡುತ್ತದೆ. ಈ ಎರಡೂ ಒಟ್ಟಾಗಿ ಯೆಹೂದಕ್ಕೆ ವಿರುದ್ಧವಾಗಿರುವುದು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.

ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.

“ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.

ವೈರಿಯ ಹಾಗೆ ಬಿಲ್ಲನ್ನು ಬೊಗ್ಗಿಸಿ, ವಿರೋಧಿಯಂತೆ ಬಲಗೈಯೆತ್ತಿ ನಿಂತು, ಸುಂದರ ಪ್ರಜೆಯನ್ನೆಲ್ಲಾ ಸಂಹರಿಸಿದ್ದಾನೆ; ಚೀಯೋನ್ ಗುಡಾರದ ಮೇಲೆ ತನ್ನ ರೋಷಾಗ್ನಿಯನ್ನು ಸುರಿಸಿದ್ದಾನೆ.

ಆತನ ಮುಂದೆ ಬೆಟ್ಟಗಳು ಅದರುತ್ತವೆ, ಗುಡ್ಡಗಳು ಕರಗುತ್ತವೆ; ಆತನ ದರ್ಶನಕ್ಕೆ ಭೂಮಿಯು ಕಂಪಿಸುತ್ತದೆ, ಹೌದು, ಲೋಕವೂ ಲೋಕನಿವಾಸಿಗಳೆಲ್ಲರೂ ತಲ್ಲಣಿಸುತ್ತವೆ.