TSK

TSK · ಯೆರೆಮಿಯ 21:6

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು, “ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ, ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು.

ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ, “ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವುದು; ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಕಾಡುಮರಗಳ ಮೇಲೆಯೂ, ಭೂಮಿಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಅದು ಆರದೆ ದಹಿಸುವುದು.”

ಇವರು ಉಪವಾಸಮಾಡುವಾಗ ಇವರ ಮೊರೆಯನ್ನು ಕೇಳೆನು. ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು. ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು” ಎಂದು ಹೇಳಿದನು.

ಏಕೆಂದರೆ, ಇಗೋ, ನಾನು ನಿನ್ನನ್ನು ನಿನಗೂ ಮತ್ತು ನಿನ್ನ ಎಲ್ಲಾ ಸ್ನೇಹಿತರಿಗೂ ದಿಗಿಲಿಗಿ ಆಸ್ಪದನನ್ನಾಗಿ ಮಾಡುವೆನು; ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು, ನೀನು ಅದನ್ನು ಕಣ್ಣಾರೆ ಕಾಣುವಿ. ನಾನು ಯೆಹೂದ್ಯರನ್ನೆಲ್ಲಾ ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬಿಲೋನಿಗೆ ಸೆರೆಯಾಗಿ ಒಯ್ದು ಕತ್ತಿಯಿಂದ ಕಡಿಯುವನು.

ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಜನ, ಪಶುಗಳಿಲ್ಲದೆ ಹಾಳಾಗಿರುವ ಈ ಪ್ರಾಂತ್ಯವೂ, ಇಲ್ಲಿನ ಎಲ್ಲಾ ಊರುಗಳೂ ಕುರುಬರು ತಮ್ಮ ಹಿಂಡುಗಳನ್ನು ತಂಗಿಸುವುದಕ್ಕೆ ಪುನಃ ಆಸರೆಯಾಗುವವು.

ಅಲ್ಲದೆ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, ‘ಯೆಹೋವನು ಇಂತೆನ್ನುತ್ತಾನೆ, ಬಾಬೆಲಿನ ಅರಸನು ಬಂದು ಈ ದೇಶವನ್ನು ಜನ, ಪಶುಗಳಿಲ್ಲದಂತೆ ಹಾಳುಮಾಡುವುದು ಖಂಡಿತ ಎಂದು ಸುರುಳಿಯನ್ನು ಬರೆಯಿಸಿದ್ದೇಕೆ ಎಂಬುದಾಗಿ ನೀನು ಆಕ್ಷೇಪಿಸಿ ಅದನ್ನು ಸುಟ್ಟುಬಿಟ್ಟಿಯಲ್ಲ.

ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲೂ ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.

ನಾನು ಕೆಲವರನ್ನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಉಳಿಸಿ ಅವರು ತಮ್ಮ ಅಸಹ್ಯ ಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವುದಕ್ಕೆ ಅವಕಾಶ ಮಾಡುವೆನು; ನಾನೇ ಯೆಹೋವನು ಎಂದು ಆ ಜನಾಂಗಗಳಿಗೂ ಗೊತ್ತಾಗುವುದು.”

¶ “ಖಡ್ಗವೇ, ದೇಶವನ್ನು ಹೊಕ್ಕು ಹೋಗು ಎಂದು ಆಜ್ಞಾಪಿಸಿ, ನಾನು ಅದನ್ನು ಆ ದೇಶಕ್ಕೆ ತಂದು, ಜನ ಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ,

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಖಡ್ಗ, ಕ್ಷಾಮ, ದುಷ್ಟಮೃಗ ಮತ್ತು ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಯೆರೂಸಲೇಮಿನ ಮೇಲೆ ಒಟ್ಟಿಗೆ ತಂದು, ಜನರನ್ನು, ಪಶುಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!

ಅವರು ನಡೆಸಿದ ಬಹು ದುರಾಚಾರಗಳ ನಿಮಿತ್ತ ನಾನು ದೇಶವನ್ನು ಹಾಳುಮಾಡಿದಾಗ ನಾನೇ ಯೆಹೋವನು” ಎಂದು ಅವರಿಗೆ ದೃಢವಾಗುವುದು.

ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಉಳಲ್ಪಡುವುದು, ಯೆರೂಸಲೇಮು ಹಾಳುದಿಬ್ಬಗಳಾಗುವುದು. ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವುದು.

‹ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.›