TSK

TSK · ಯೆರೆಮಿಯ 31:13

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯೆರೂಸಲೇಮಿನ ಪೌಳಿಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು, ಕೀರ್ತನೆ ಗಾಯನಗಳಿಂದಲೂ ತಾಳ, ಸ್ವರಮಂಡಲ ಹಾಗು ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಕರೆಸಿಕೊಂಡರು.

ಆ ದಿನಗಳಲ್ಲಿ ಯೆಹೂದ್ಯರಿಗೆ ಶತ್ರುಪೀಡೆ ತಪ್ಪಿ ವಿಶ್ರಾಂತಿ ಉಂಟಾಯಿತು. ಆ ತಿಂಗಳಿನಲ್ಲಿ ಸಂತಾಪವು ಪರಿಹಾರವಾಗಿ ಅವರಿಗೆ ಸಂತೋಷವುಂಟಾಯಿತು; ದುಃಖವು ಹೋಗಿ ಸುಖಕಾಲವು ಬಂದಿತು. ಆದುದರಿಂದ ಅವರು ಆ ದಿನಗಳಲ್ಲಿ ಉತ್ಸವಭೋಜನ ಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡು ಬಡವರಿಗೆ ದಾನಧರ್ಮ ಮಾಡಬೇಕು.

ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ; ದಮ್ಮಡಿ, ಕಿನ್ನರಿಗಳಿಂದ ಆತನನ್ನು ಭಜಿಸಲಿ.

ಯೆಹೋವನು ವಿಮೋಚಿಸಿದವರು ಹಿಂದಿರುಗಿ, ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು, ದುಃಖವೂ, ನಿಟ್ಟುಸಿರೂ ಓಡಿಹೋಗುವವು.

ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.

ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.

ಇಸ್ರಾಯೇಲೆಂಬ ಯುವತಿಯೇ, ನಾನು ನಿನ್ನ ಹಾಳುಪ್ರದೇಶಗಳನ್ನು ಪುನಃ ಕಟ್ಟುವೆನು; ಅವು ಕಟ್ಟಡಗಳಾಗುವವು. ನೀನು ಮತ್ತೆ ದಮ್ಮಡಿಗಳಿಂದ ವೈಭವಗೊಂಡು ವಿನೋದಪಡುವವರ ನಾಟ್ಯಗಳಲ್ಲಿ ಸೇರಿಕೊಳ್ಳುವಿ.

ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಯೆರೂಸಲೇಮಿನ ಚೌಕಗಳಲ್ಲಿ ಮುದುಕ ಮತ್ತು ಮುದುಕಿಯರು ಸೇರುವರು. ಅತಿ ವೃದ್ಧಾಪ್ಯದ ನಿಮಿತ್ತ ಪ್ರತಿಯೊಬ್ಬ ಮುದುಕನ ಕೈಯಲ್ಲಿ ಊರುಗೋಲಿರುವುದು.

‹ಹಾಗೆಯೇ, ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರುಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವುದು, ಮತ್ತು ನಿಮ್ಮ ಆನಂದವನ್ನು ಯಾರು ನಿಮ್ಮಿಂದ ತೆಗೆದು ಹಾಕಲು ಸಾಧ್ಯವಿಲ್ಲ.›