TSK

TSK · ಯೆರೆಮಿಯ 34:21

مراجع Treasury of Scripture Knowledge في ಕನ್ನಡ IRV.

العودة إلى المقطع

ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡು ಹೋಗಿದ್ದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ಯಾಜಕನಾದ ಚೆಫನ್ಯನು ಮೂರು ಮಂದಿ ದ್ವಾರಪಾಲಕರು,

ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಹಿಡಿಯಲ್ಪಟ್ಟು ಅವನ ವಶವಾಗುವಿ; ಬಾಬೆಲಿನ ಅರಸನ ಸಮಕ್ಷಮದಲ್ಲಿ ನಿಲ್ಲುವಿ; ಅವನು ನಿನ್ನ ಸಂಗಡ ಎದುರೆದುರಾಗಿ ಮಾತನಾಡುವನು; ನೀನು ಬಾಬಿಲೋನಿಗೆ ಗಡಿ ಪಾರಾಗುವಿ.

ಆ ಬಾಬೆಲಿನ ಅರಸನು ಅಲ್ಲಿ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ರಿಬ್ಲದಲ್ಲಿ ಅಲ್ಲೇ ಅವನ ಕಣ್ಣೆದುರಿಗೆ ವಧಿಸಿ ಯೆಹೂದದ ಸಮಸ್ತ ಶ್ರೀಮಂತರನ್ನೂ ಕೊಲ್ಲಿಸಿದನು.

ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ತರಗತಿಯ ಯಾಜಕನಾದ ಚೆಫನ್ಯನು, ಮೂರು ಜನ ದ್ವಾರಪಾಲಕರು,

“ದ್ರೋಹಿ ವಂಶದವರಾದ ಈ ಜನರಿಗೆ ಹೀಗೆ ಹೇಳು, ಇದರ ಅಭಿಪ್ರಾಯವು ನಿಮಗೆ ಗೊತ್ತಿಲ್ಲವೋ? ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅಲ್ಲಿನ ಅರಸನನ್ನೂ ಮತ್ತು ಪ್ರಧಾನರನ್ನೂ ಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋದನು.

ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು, ಅವನನ್ನು ಬಾಬಿಲೋನಿಗೆ ತಂದು ಅಲ್ಲೇ ಅವನೊಂದಿಗೆ ವಾದಿಸಿ, ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.