ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ದೇಶದ ಎಲ್ಲಾ ಪಟ್ಟಣಗಳಿಗೂ ಅವರು ಮುತ್ತಿಗೆಹಾಕಿ, ನೀವು ನಂಬಿಕೊಂಡಿದ್ದ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು.
TSK
TSK · ಯೆರೆಮಿಯ 37:21
مراجع Treasury of Scripture Knowledge في ಕನ್ನಡ IRV.
ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೇ ಹೋಯಿತು.
ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ.
ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.
ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ, ಅವನ ಶತ್ರುಗಳನ್ನೂ ಮಿತ್ರರನ್ನಾಗಿ ಮಾಡುವನು.
ಇವನಿಗೆ ಗಿರಿದುರ್ಗಗಳೇ, ಆಶ್ರಯ ಅನ್ನವು ಉಚಿತವಾಗಿ ಒದಗುವುದು, ನೀರು ನಿಸ್ಸಂದೇಹವಾಗಿ ದೊರಕುವುದು.
ಆ ಕಾಲದಲ್ಲಿ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮನ್ನು ಮುತ್ತಿತು ಮತ್ತು ಪ್ರವಾದಿಯಾದ ಯೆರೆಮೀಯನು ಯೆಹೂದದ ರಾಜನ ಮನೆಗೆ ಸೇರಿದ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು.
“ಎನ್ನೊಡೆಯನೇ, ಅರಸನೇ, ಇವರು ಪ್ರವಾದಿಯಾದ ಯೆರೆಮೀಯನಿಗೆ ಮಾಡಿದ್ದೆಲ್ಲಾ ದುಷ್ಟಕಾರ್ಯವೇ ಸರಿ, ಅವನನ್ನು ಬಾವಿಯಲ್ಲಿ ಹಾಕಿದ್ದಾರೆ; ಅವನು ಆಹಾರವಿಲ್ಲದೆ ಬಿದ್ದಲ್ಲೇ ಸಾಯುವುದು ಖಂಡಿತ, ಪಟ್ಟಣದಲ್ಲಿ ಇನ್ನು ರೊಟ್ಟಿಯಿಲ್ಲವಲ್ಲಾ” ಎಂದು ಅರಿಕೆಮಾಡಿದನು.
ಯೆರೂಸಲೇಮು ಶತ್ರುವಶವಾಗುವ ತನಕ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.
¶ ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಯೆಹೋವನು ಅವನಿಗೆ ಈ ಮಾತನ್ನು ದಯಪಾಲಿಸಿದನು,
ಕಣ್ಣೀರು ಸುರಿಸಿ ಸುರಿಸಿ ನನ್ನ ಕಣ್ಣು ಇಂಗಿ ಹೋಗಿದೆ, ನನ್ನ ಕರುಳು ಕುದಿಯುತ್ತದೆ, ನನ್ನ ಜನವೆಂಬ ಕನ್ಯೆಯು ಹಾಳಾಗಿ ಮಕ್ಕಳುಮರಿಗಳು ಪಟ್ಟಣದ ಚೌಕಗಳಲ್ಲಿ ಮೂರ್ಛೆ ಹೋದುದರಿಂದ ನನ್ನ ಕರುಳು ಕರಗಿದೆ.
ಮೊಲೆಕೂಸಿನ ನಾಲಿಗೆಯು ದಾಹದಿಂದ ಸೇದಿಹೋಗಿದೆ. ಅನ್ನ ಬೇಕೆನ್ನುವ ಎಳೆಯ ಮಕ್ಕಳಿಗೆ ಅನ್ನಕೊಡುವವರು ಯಾರೂ ಇಲ್ಲ.
ಕ್ಷಾಮಕಾಲದ ಭೀಕರ ಜ್ವರದಿಂದ ನಮ್ಮ ಚರ್ಮವು ಒಲೆಯಂತೆ ಸುಡುತ್ತದೆ.
ಪೇತ್ರನು ಸೆರೆಮನೆಯೊಳಗೆ ಕಾವಲಲ್ಲಿದ್ದಾಗ, ಸಭೆಯವರು ಅವನಿಗೋಸ್ಕರ ಆಸಕ್ತಿಯಿಂದ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದರು.
¶ ನಾವು ರೋಮಾಪುರಕ್ಕೆ ಬಂದ ಮೇಲೆ, ಪೌಲನು ತನ್ನನ್ನು ಕಾಯುತ್ತಿದ್ದ ಸಿಪಾಯಿಯೊಂದಿಗೆ ಪ್ರತ್ಯೇಕವಾಗಿರಬಹುದೆಂಬ ಅಪ್ಪಣೆಯನ್ನು ಹೊಂದಿದನು.
¶ ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
¶ ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು.