TSK

TSK · ಯೆರೆಮಿಯ 39:6

مراجع Treasury of Scripture Knowledge في ಕನ್ನಡ IRV.

العودة إلى المقطع

ಕಲ್ಲೆಸೆಯುವಷ್ಟು ದೂರ ಹೋಗಿ ಕುಳಿತುಕೊಂಡು, “ಮಗುವು ಸಾಯುವುದನ್ನು ನೋಡಲಾರೆನು” ಎಂದು ಹೇಳಿ ಜೋರಾಗಿ ಅತ್ತಳು.

ಚಿದ್ಕೀಯನ ಇಬ್ಬರು ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರಲ್ಲದೆ ಅವನಿಗೆ ಬೇಡಿಹಾಕಿ, ಅವನ ಎರಡು ಕಣ್ಣುಗಳನ್ನು ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು.

ನನ್ನ ಜನರಿಗೆ ಕೇಡು ಸಂಭವಿಸುವುದನ್ನು ನೋಡಿ ನಾನು ಸಹಿಸಿಕೊಂಡಿರುವುದು ಹೇಗೆ? ನನ್ನ ಕುಲನಾಶನವನ್ನು ನೋಡುತ್ತಾ ಸುಮ್ಮನಿರುವುದು ಹೇಗೆ?” ಎಂದು ಬಿನ್ನವಿಸಿದಳು.

ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವರ ಸೇವಕರನ್ನೂ ವ್ಯಾಧಿ, ಖಡ್ಗ ಮತ್ತು ಕ್ಷಾಮಗಳಿಂದ ಹತರಾಗದೆ ಉಳಿದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು. ಅವನು ಅವರನ್ನು ಕರುಣಿಸದೆ, ಕನಿಕರದಿಂದ ಉಳಿಸದೆ ಕತ್ತಿಯಿಂದ ಸಂಹರಿಸುವನು.

ನನ್ನ ಒಡಂಬಡಿಕೆಯನ್ನು ಮೀರಿದ ಯೆಹೂದದ ಪ್ರಧಾನರು, ಯೆರೂಸಲೇಮಿನ ಪ್ರಧಾನರು, ಕಂಚುಕಿಗಳು, ಯಾಜಕರು,

ಬಾಬೆಲಿನ ಅರಸನು ಅವನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಎದುರಿನಲ್ಲಿಯೇ ವಧಿಸಿ, ಯೆಹೂದದ ಸಕಲ ಸರದಾರರನ್ನು ರಿಬ್ಲದಲ್ಲಿ ಕೊಲ್ಲಿಸಿದನು.

“ಯೆಹೋವನ ಆ ಯಜ್ಞದಿನದಲ್ಲಿ ನಾನು ದೇಶಾಧಿಪತಿಗಳನ್ನೂ, ರಾಜವಂಶದವರನ್ನೂ, ವಿದೇಶ ವಸ್ತ್ರದಾರಿಗಳೆಲ್ಲರನ್ನೂ ದಂಡಿಸುವೆನು.