TSK

TSK · ಯೆರೆಮಿಯ 39:7

مراجع Treasury of Scripture Knowledge في ಕನ್ನಡ IRV.

العودة إلى المقطع

ಚಿದ್ಕೀಯನ ಇಬ್ಬರು ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರಲ್ಲದೆ ಅವನಿಗೆ ಬೇಡಿಹಾಕಿ, ಅವನ ಎರಡು ಕಣ್ಣುಗಳನ್ನು ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು.

ನಿನ್ನ ಕಟ್ಟಳೆಗಳನ್ನು ಅನುಸರಿಸುವ ನನ್ನನ್ನು, ಸಂಪೂರ್ಣವಾಗಿ ಕೈಬಿಡಬೇಡ.

ಅದೇನೆಂದರೆ, ಇಗೋ ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಪ್ರಾಣ ಹುಡುಕುತ್ತಿದ್ದ ಶತ್ರುವಾದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಕೈಗೆ ಕೊಟ್ಟಂತೆ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣ ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇದು ಯೆಹೋವನಾದ ನನ್ನ ನುಡಿ’” ಎಂಬುದೇ.

ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು; ಕಸ್ದೀಯರ ದೇಶವಾದ ಬಾಬಿಲೋನಿಗೆ ಅವನನ್ನು ಒಯ್ಯುವೆನು, ಅಲ್ಲೇ ಇದ್ದು ಸಾಯುವನು, ಆದರೂ ಆ ದೇಶವನ್ನು ನೋಡುವುದಿಲ್ಲ.