TSK

TSK · ಯೆರೆಮಿಯ 46:2

مراجع Treasury of Scripture Knowledge في ಕನ್ನಡ IRV.

العودة إلى المقطع

ಬಾಬೆಲಿನ ಅರಸನು ಐಗುಪ್ತದ ಕಣಿವೆಯಿಂದ ಯೂಫ್ರೆಟಿಸ್ ನದಿವರೆಗೂ ಇದ್ದ, ಎಲ್ಲಾ ಭೂಪ್ರದೇಶವನ್ನು ಸ್ವಾಧೀನಮಾಡಿಕೊಂಡನು. ಅನಂತರ ಐಗುಪ್ತದ ಅರಸನು ತನ್ನ ದೇಶದಿಂದ ರಾಜ್ಯವ್ಯಾಪ್ತಿಗಾಗಿ ಹೊರಡಲಿಲ್ಲ.

ಕರ್ಕೆಮೀಷಿನ ಗತಿಯು ಕಲ್ನೋವಿಗೆ ಆಯಿತಲ್ಲವೇ? ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಲ್ಲವೇ? ದಮಸ್ಕದ ಗತಿಯು ಸಮಾರ್ಯಕ್ಕೂ ಸಂಭವಿಸಿತಲ್ಲವೇ?

¶ ಅ ದಿನದಲ್ಲಿ ಐಗುಪ್ತ ದೇಶದ ಮಧ್ಯದಲ್ಲಿ ಯೆಹೋವನಿಗೆ ಒಂದು ಯಜ್ಞಪೀಠವು, ದೇಶದ ಮೇರೆಯಲ್ಲಿ ಯೆಹೋವನಿಗೆ ಒಂದು ಸ್ತಂಭವೂ ಇರುವುದು.

ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.

¶ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಯೆಹೋವನು ಯೆರೆಮೀಯನಿಗೆ,

“ಐಗುಪ್ತದಲ್ಲಿ ಪ್ರಕಟಿಸಿರಿ, ಮಿಗ್ದೋಲ್, ತಹಪನೇಸ್, ನೋಫ್, ಎಂಬ ಪಟ್ಟಣಗಳಲ್ಲಿ ಪ್ರಚುರಪಡಿಸಿರಿ, ‘ಐಗುಪ್ತವೇ, ಸ್ಥಿರವಾಗಿ ನಿಂತುಕೊಂಡು ಸನ್ನದ್ಧವಾಗು! ಖಡ್ಗವು ನಿನ್ನ ಸುತ್ತಲು ನುಂಗಿಬಿಟ್ಟಿದೆ’ ಎಂದು ಸಾರಿರಿ.