TSK

TSK · ಯೆರೆಮಿಯ 46:21

مراجع Treasury of Scripture Knowledge في ಕನ್ನಡ IRV.

العودة إلى المقطع

ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.

ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು, “ಇಸ್ರಾಯೇಲರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧವಾಗಿ ಕರೆದುತಂದಿದ್ದಾರೆ” ಅಂದುಕೊಂಡು,

ದ್ವೇಷವಿರುವಲ್ಲಿ ಮೃಷ್ಟಾನ್ನಕ್ಕಿಂತಲೂ, ಪ್ರೇಮವಿರುವಲ್ಲಿ ಸೊಪ್ಪಿನ ಊಟವೇ ಉತ್ತಮ.

ಈ ಯಜ್ಞಪಶುಗಳೊಂದಿಗೆ ಕಾಡುಕೋಣಗಳೂ ಮತ್ತು ಹೋರಿಗೂಳಿಗಳೂ ಹತವಾಗುವವು. ಆ ದೇಶವು ರಕ್ತದಿಂದ ತೊಯಿದಿರುವುದು, ಅಲ್ಲಿನ ಧೂಳು ಕೊಬ್ಬಿನಿಂದ ಜಿಡ್ಡಾಗಿರುವುದು.

ಆಹಾ, ನನ್ನ ಕಣ್ಣಿಗೆ ಬಿದ್ದದ್ದೇನು? ಅವರು ಧೈರ್ಯಗೆಟ್ಟು ಬೆನ್ನುಕೊಟ್ಟಿದ್ದಾರೆ. ಅವರ ಶೂರರು ಪೆಟ್ಟುತಿಂದು ಹಿಂದಿರುಗದೆ ಓಡಿಹೋಗುತ್ತಾರೆ; ಸುತ್ತಮುತ್ತಲು ದಿಗಿಲು ಎಂದು ಯೆಹೋವನು ಅನ್ನುತ್ತಾನೆ.

ನಿನ್ನ ಬಸವ ಬಿದ್ದು ಹೋದದ್ದೇನು? ಯೆಹೋವನು ಅದನ್ನು ಕೆಡವಿದನು, ನಿಲ್ಲಲಾರದೆ ಹೋಯಿತು.

“ನನ್ನ ಸ್ವತ್ತನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುವವರೂ, ಕಣತುಳಿಯುವ ಕಡಸಿನ ಹಾಗೆ ಕುಣಿದಾಡುವವರೂ, ಕೊಬ್ಬಿದ ಕುದುರೆಗಳಂತೆ ಹೇಕರಿಸುವವರೂ ಆಗಿರುವುದರಿಂದ

ಪಾರಸಿಯರೂ, ಲೂದ್ಯರೂ, ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು. ಗುರಾಣಿಯನ್ನು ಮತ್ತು ಶಿರಸ್ತ್ರಾಣವನ್ನು ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು!

¶ “‘ನೀನು ಇಸ್ರಾಯೇಲರ ಮೇಲೆ ದೀರ್ಘ ದ್ವೇಷವಿಟ್ಟು, ಅವರ ಅಪರಾಧದ ಕಡೆಯ ಕಾಲದಲ್ಲಿ ಆಪತ್ತು ಸಂಭವಿಸಿದಾಗ, ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದೆ.

ದಂತದ ಮಂಚಗಳ ಮೇಲೆ ಮಲಗುತ್ತಾರೆ ಮತ್ತು ತಮ್ಮ ಗದ್ದುಗೆಗಳಲ್ಲಿ ಹಾಯಾಗಿ ಒರಗಿಕೊಳ್ಳುತ್ತಾರೆ. ಹಿಂಡಿನ ಕುರಿಮರಿಗಳನ್ನು, ಕೊಟ್ಟಿಗೆಯ ಕರುಗಳನ್ನು ತಿನ್ನುತ್ತಾರೆ.

ಅವರಲ್ಲಿ ಉತ್ತಮನೂ ಮುಳ್ಳಿನ ಪೊದೆಗೆ ಸಮಾನ, ಸತ್ಯವಂತನೂ ಕೂಡ ಮುಳ್ಳುಬೇಲಿಗಿಂತ ಕಡೆ. ನಿನ್ನ ಕಾವಲುಗಾರರು ಮುಂತಿಳಿಸಿದ ನಿನ್ನ ದಂಡನೆಯ ದಿನ ಬಂದಿದೆ. ಈಗ ನಿನ್ನ ಜನರಿಗೆ ಭ್ರಾಂತಿ ಹಿಡಿಯುವುದು.