TSK

TSK · ಯೆರೆಮಿಯ 49:28

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಇಷ್ಮಾಯೇಲನ ಮಕ್ಕಳಿಗೂ ಇವರಿಂದ ಹುಟ್ಟಿದ ಕುಲಗಳಿಗೂ ಇರುವ ಹೆಸರುಗಳು ಯಾವುದೆಂದರೆ: ಮೊದಲು ಹುಟ್ಟಿದವನು ನೆಬಾಯೋತ್, ಆ ಮೇಲೆ ಹುಟ್ಟಿದವರು ಕೇದಾರ್, ಅದ್ಬಯೇಲ್, ಮಿಬ್ಸಾಮ್,

¶ ಇಷ್ಮಾಯೇಲರ ವಂಶಾವಳಿ: ಇಷ್ಮಾಯೇಲನಿಗೆ ಮೊದಲು ಹುಟ್ಟಿದವನು ನೆಬಾಯೋತ್, ಆ ಮೇಲೆ ಹುಟ್ಟಿದವರು ಕೇದಾರ್, ಅದ್ಬೆಯೇಲ್, ಮಿಬ್ಸಾಮ್,

ಅಯ್ಯೋ, ನಾನು ಮೇಷೆಕಿನವರಲ್ಲಿ ತಂಗಬೇಕಲ್ಲಾ! ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ!

ಆದರೆ ಅವರು ಪಶ್ಚಿಮದಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆಮಾಡುವರು. ಎದೋಮಿನ ಮತ್ತು ಮೋವಾಬಿನ ಮೇಲೆ ಕೈಮಾಡುವರು. ಅಮ್ಮೋನಿಯರು ಅವರಿಗೆ ಅಧೀನರಾಗುವರು.

ಅರಬಿಯ ವಿಷಯವಾದ ದೈವೋಕ್ತಿ. ಓ ದೇದಾನ್ಯರೇ, ಅರಬಿಯದ ಮರುಭೂಮಿಯಲ್ಲಿ ಇಳಿದುಕೊಳ್ಳಿರಿ.

ಅರಣ್ಯವೂ, ಅಲ್ಲಿನ ಊರುಗಳೂ, ಕೇದಾರಿನವರು ವಾಸಿಸುವ ಗ್ರಾಮಗಳೂ ಆರ್ಭಟಿಸಲಿ, ಸೆಲ ಪಟ್ಟಣದವರು ಹರ್ಷಧ್ವನಿಗೈದು ಪರ್ವತಾಗ್ರಗಳಲ್ಲಿ ಜಯಘೋಷ ಮಾಡಿರಿ.

ದೆದಾನ್ಯರು, ತೇಮಾ ದೇಶದವರು, ಬೂಜ್ ದೇಶದವರು, ಚಂಡಿಕೆ ಬಿಟ್ಟುಕೊಂಡಿರುವವರೆಲ್ಲರು,

ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ; ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ನೀವು ಕೂಡಿಕೊಂಡು ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳಿರಿ.

ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವುದು; ಅಲ್ಲಿ ಯಾರೂ ವಾಸಿಸರು, ಯಾವ ನರಮನುಷ್ಯನೂ ಇಳುಕೊಳ್ಳನು, ಇದು ಯೆಹೋವನ ನುಡಿ.”

ಅರಬರು ಮತ್ತು ಕೇದಾರಿನ ಪ್ರಧಾನರೂ ನಿನ್ನ ಕೈಕೆಳಗಿನ ವರ್ತಕರಾಗಿದ್ದರು; ಕುರಿಮರಿಗಳಿಂದಲೂ, ಟಗರುಗಳಿಂದಲೂ, ಹೋತಗಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದ್ದರು.