TSK

TSK · ಯೆರೆಮಿಯ 49:36

مراجع Treasury of Scripture Knowledge في ಕನ್ನಡ IRV.

العودة إلى المقطع

ನೀವು ಶತ್ರುಗಳಿಂದ ಸೋಲನ್ನು ಅನುಭವಿಸುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.

ಯೆಹೋವನು ಯೆರೂಸಲೇಮನ್ನು ಕಟ್ಟಿಸುತ್ತಿದ್ದಾನೆ, ಚದರಿಹೋಗಿದ್ದ ಇಸ್ರಾಯೇಲರನ್ನು ಕೂಡಿಸುತ್ತಿದ್ದಾನೆ,

ಆಲೋಚನೆ ಹೇಳಿರಿ, ತೀರ್ಮಾನಿಸಿರಿ; ನಡು ಮಧ್ಯಾಹ್ನದಲ್ಲಿ ನಿಮ್ಮ ನೆರಳು ರಾತ್ರಿಯ ಕತ್ತಲಿನಂತೆ ದಟ್ಟವಾದ ನೆರಳನ್ನು ಕೊಡಲಿ. ನಿಮ್ಮಲ್ಲಿರುವ ದೀನದಲಿತರನ್ನು ಸಂರಕ್ಷಿಸು, ತಪ್ಪಿಸಿಕೊಂಡು ಹೋಗುವ ಜನರ ವಿಷಯವನ್ನು ಬಯಲುಮಾಡಬೇಡಿ.

ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನೆಂದರೆ, ‘ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು’” ಎಂಬುದೇ.

ಅವರ ಒಂಟೆಗಳು ಕೊಳ್ಳೆಯಾಗುವವು, ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವವು; ಚಂಡಿಕೆಬಿಟ್ಟುಕೊಂಡಿರುವ ಜನರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು; ಎಲ್ಲಾ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು.

ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲೂ ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.

ಆ ಹೋತವು ತನ್ನನ್ನು ಬಹಳವಾಗಿ ಹೆಚ್ಚಿಸಿಕೊಂಡಿತು, ಆದರೆ ಅದು ಪ್ರಾಬಲ್ಯಕ್ಕೆ ಬಂದಾಗಲೇ ಅದರ ದೊಡ್ಡ ಕೊಂಬು ಮುರಿದು ಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಚತುರ್ದಿಕ್ಕುಗಳಿಗೆ ಚಾಚಿಕೊಂಡವು.

ಅವನು ತಲೆಯೆತ್ತಿದ ಮೇಲೆ ಅವನ ರಾಜ್ಯವು ಒಡೆದು ನಾಲ್ಕು ದಿಕ್ಕುಗಳಿಗೂ ನಾಲ್ಕು ಪಾಲಾಗುವುದು. ಅದು ಅವನ ಸಂತತಿಗೆ ಭಾಗವಾಗದು. ಅವನ ಆಳ್ವಿಕೆಯಲ್ಲಿ ರಾಜ್ಯವು ಪ್ರಬಲವಾಗಿದ್ದಂತೆ ಇನ್ನು ಪ್ರಬಲವಾಗದು. ಆ ರಾಜ್ಯವು ಕೀಳಲ್ಪಟ್ಟು ನಾಲ್ವರಿಗೆ ಮಾತ್ರವಲ್ಲದೆ ಇತರರಿಗೂ ಪಾಲಾಗುವುದು.

¶ ಇದಾದ ನಂತರ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ಚತುರ್ದಿಕ್ಕುಗಳ ಗಾಳಿಗಳನ್ನು ತಡೆಹಿಡಿದಿರುವುದನ್ನು ಕಂಡೆನು.