ಅವನ ಜನರು ಯೆರೂಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲಾ ರಾಜಮಂದಿರಗಳನ್ನೂ, ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿ; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.
TSK
TSK · ಯೆರೆಮಿಯ 52:13
مراجع Treasury of Scripture Knowledge في ಕನ್ನಡ IRV.
ಅವರು ನಿನ್ನ ಪವಿತ್ರಾಲಯಕ್ಕೆ ಬೆಂಕಿ ಹಚ್ಚಿ, ನಿನ್ನ ನಾಮಕ್ಕೆ ಪ್ರತಿಷ್ಠಿತವಾದ ಮಂದಿರವನ್ನು ಹೊಲೆಮಾಡಿ, ನೆಲಸಮಗೊಳಿಸಿದ್ದಾರೆ.
ನಿನ್ನ ಪರಿಶುದ್ಧ ಪಟ್ಟಣಗಳು ಕಾಡಾಗಿವೆ, ಚೀಯೋನು ಬೀಡಾಗಿದೆ, ಯೆರೂಸಲೇಮು ಹಾಳಾಗಿ ಹೋಗಿದೆ.
ಆದಕಾರಣ ನನ್ನ ನಾಮಕ್ಕೆ ನೆಲೆಯಾದ ನಿಮ್ಮ ಭರವಸೆಗೆ ಆಧಾರವಾದ ಆಲಯಕ್ಕೂ, ನಾನು ನಿಮಗೂ ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ಸ್ಥಳಕ್ಕೂ ಶೀಲೋವಿಗೆ ತಂದ ಗತಿಯನ್ನೇ ಈಗ ತರುವೆನು.
ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಹಚ್ಚಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ, ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ, ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು.
ಕಸ್ದೀಯರು ಪುನಃ ಬಂದು ಈ ಪಟ್ಟಣದ ವಿರುದ್ಧವಾಗಿ ಹೋರಾಡಿ, ಆಕ್ರಮಿಸಿ ಅದನ್ನು ಬೆಂಕಿಯಿಂದ ಸುಟ್ಟುಬಿಡುವರು’” ಎಂಬುದು.
ಮತ್ತು ಕಸ್ದೀಯರು ಅರಮನೆಯನ್ನೂ, ಪ್ರಜೆಗಳ ಮನೆಗಳನ್ನೂ ಬೆಂಕಿಯಿಂದ ಸುಟ್ಟು, ಯೆರೂಸಲೇಮಿನ ಸುತ್ತಣ ಗೋಡೆಗಳನ್ನು ಕೆಡವಿದರು.
ಯೆಹೋವನು ಚೀಯೋನ್ ನಗರಿಯ ಕೋಟೆಯನ್ನು ನಾಶಪಡಿಸಬೇಕೆಂದು ನೂಲನ್ನು ಎಳೆದಿದ್ದಾನೆ; ಹಾಳು ಮಾಡುತ್ತಿರುವ ತನ್ನ ಕೈಯನ್ನು ಹಿಂದೆಗೆಯದೆ ಪೌಳಿಗೋಡೆಯೂ ಮತ್ತು ಕೋಟೆಯೂ ಮೊರೆಯುವಂತೆ ಮಾಡಿದ್ದಾನೆ; ಅವೆರಡೂ ಕುಸಿದುಹೋಗಿವೆ.
ನಿನ್ನ ಮನೆಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ದಂಡಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ನಾನು ಮಾಡುವೆನು; ನೀನು ನಿನ್ನ ಮಿಂಡರಿಗೆ ಇನ್ನು ಹಣಕೊಡದಿರುವಿ.
ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು, ‘ಇಗೋ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಪಡಿಸುವೆನು, ನೀವು ಬಿಟ್ಟು ಬಂದಿರುವ ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸೇನಾದೀಶ್ವರನಾದ ಯೆಹೋವನು ನುಡಿದಿದ್ದಾರೆ
ನ್ಯಾಯನೀತಿಗಳನ್ನು ಮಾಡುವುದಕ್ಕೆ ಅವರಿಗೆ ತಿಳಿದಿಲ್ಲ” ಇದು ಯೆಹೋವನ ನುಡಿ. ತಮ್ಮ ಉಪ್ಪರಿಗೆಗಳಲ್ಲಿ ಬಾಧೆಯನ್ನೂ, ನಾಶನವನ್ನೂ ಕೂಡಿಸಿಟ್ಟುಕೊಂಡಿದ್ದಾರೆ.
ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಉಳಲ್ಪಡುವುದು, ಯೆರೂಸಲೇಮು ಹಾಳುದಿಬ್ಬಗಳಾಗುವುದು. ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವುದು.
ಆದರೆ ಅದಕ್ಕೆ ಉತ್ತರವಾಗಿ ಆತನು ಅವರಿಗೆ, ‹“ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ, ಎಲ್ಲಾ ಕೆಡವಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ”› ಅಂದನು.