ನಾವು ಸಾಯುವವರು. ನೆಲದ ಮೇಲೆ ಚೆಲ್ಲಿದ ನೀರು ಪುನಃ ತೆಗೆದುಕೊಳ್ಳಲು ಆಗದಂತೆ ಇರುವ ನೀರಿನಂತೆ ನಾವು. ಮನುಷ್ಯರ ಪ್ರಾಣವನ್ನು ತೆಗೆಯುವುದಕ್ಕೆ ದೇವರಿಗೆ ಇಷ್ಟವಿಲ್ಲ. ತಳ್ಳಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನು ಸದುಪಾಯಗಳನ್ನು ಕಲ್ಪಿಸುವವನಾಗಿರುತ್ತಾನೆ.
TSK
TSK · ಯೋಬನು 10:21
مراجع Treasury of Scripture Knowledge في ಕನ್ನಡ IRV.
ಆಗಲೇ ಸತ್ತಿದ್ದರೆ ನಾನೀಗ ಮೌನವಾಗಿ ಮಲಗಿರುತ್ತಿದ್ದೆ, ಕಣ್ಣು ಮುಚ್ಚಿ ಪ್ರಶಾಂತವಾಗಿ ನಿದ್ರಿಸುತ್ತಿದ್ದೆನು.
ಮೋಡ ಹರಿದು ಮಾಯವಾಗುವಂತೆ, ಪಾತಾಳಕ್ಕೆ ಇಳಿದು ಹೋದವನು ತಿರುಗಿ ಬರುವುದಿಲ್ಲ.
ನಾನು ಹಿಂದಿರುಗದ ದಾರಿಯನ್ನು, ಕೆಲವು ವರ್ಷಗಳೊಳಗೆ ಹಿಡಿಯುವೆನು.”
ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.
ಅಧೋಲೋಕದಲ್ಲಿಯೂ, ಗಾಢಾಂಧಕಾರದಲ್ಲಿಯೂ, ಅಗಾಧ ಸ್ಥಳದಲ್ಲಿಯೂ ನನ್ನನ್ನು ತಳ್ಳಿಬಿಟ್ಟಿದ್ದಿ.
ನಾನಾದರೋ ಯೆಹೋವನೇ, ನಿನಗೆ ಮೊರೆಯಿಡುತ್ತೇನೆ; ಮುಂಜಾನೆಯಲ್ಲಿ ನನ್ನ ವಿಜ್ಞಾಪನೆಯು ನಿನ್ನ ಮುಂದೆ ಬರುವುದು.
ಬಹಳ ವರ್ಷ ಬದುಕುವವನು, ಅವುಗಳಲ್ಲೆಲ್ಲಾ ಆನಂದಿಸಲಿ, ಆದರೆ ಅಂಧಕಾರದ ದಿನಗಳನ್ನು ನೆನಪಿಗೆ ತರಲಿ, ಏಕೆಂದರೆ ಅವು ಬಹಳವಾಗಿರುವವು. ಮುಂದಾಗುವುದೆಲ್ಲ ವ್ಯರ್ಥವೇ.
‘ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ಕಾಡಾಗಿಯೂ, ಹಳ್ಳಕೊಳ್ಳವಾಗಿಯೂ, ನಿರ್ಜಲವಾಗಿಯೂ, ಘೋರಾಂಧಕಾರವಾಗಿಯೂ, ಯಾರೂ ಹಾದುಹೋಗದೆಯೂ, ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡೆಸಿದ ಯೆಹೋವನು ಎಲ್ಲಿ?’ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.