TSK

TSK · ಯೋಬನು 12:13

مراجع Treasury of Scripture Knowledge في ಕನ್ನಡ IRV.

العودة إلى المقطع

ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು. ಆತನ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?

ಆತನಲ್ಲಿ ಬಲವೂ, ಸಾಮರ್ಥ್ಯವೂ ಉಂಟು; ತಪ್ಪಿದವನೂ, ತಪ್ಪಿಸಿದವನೂ ಆತನಿಗೆ ಅಧೀನರಾಗಿರುವರು.

¶ ಆಗ ಬೂಜ್ ಕುಲಕ್ಕೆ ಸೇರಿದ ಬರಕೇಲನ ಮಗನಾದ ಆ ಎಲೀಹು ಇಂತೆಂದನು, “ನಾನು ಯೌವನಸ್ಥನು, ನೀವು ನನಗಿಂತ ಹಿರಿಯರು; ಆದುದರಿಂದ ಸಂಕೋಚಪಟ್ಟು ನನ್ನ ಅಭಿಪ್ರಾಯವನ್ನು ನಿಮಗೆ ಅರಿಕೆಮಾಡಲು ಹೆದರಿದೆನು.”

ಇಗೋ, ದೇವರು ಮಹಾಶಕ್ತನಾಗಿದ್ದರೂ ಯಾರನ್ನೂ ತಿರಸ್ಕರಿಸುವುದಿಲ್ಲ, ಆತನ ಬುದ್ಧಿ ಸಾಮರ್ಥ್ಯವು ಅಪಾರವಾಗಿದೆ.

ನಮ್ಮ ಕರ್ತನು ದೊಡ್ಡವನೂ, ಪರಾಕ್ರಮಿಯೂ ಆಗಿದ್ದಾನೆ, ಆತನ ಜ್ಞಾನವು ಅಪರಿಮಿತವಾಗಿದೆ.

ಯೆಹೋವನ ಆತ್ಮಕ್ಕೆ ಯಾರು ವಿಧಿಯನ್ನು ನೇಮಿಸಿದನು? ಆಲೋಚನಾ ಕರ್ತನಾಗಿ ಆತನಿಗೆ ಉಪದೇಶಿಸಿದವರು ಯಾರು?

ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ.

‹ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.›

ಆದರೆ ದೇವರಿಂದ ಕರಿಸಿಕೊಂಡವರಾದ ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ ಕ್ರಿಸ್ತನೇ ದೇವರ ಶಕ್ತಿಯೂ ಮತ್ತು ದೇವರ ಜ್ಞಾನವೂ ಆಗಿರುವಾತನೆಂದು ನಾವು ಸಾರುತ್ತೇವೆ.

¶ ಇದಲ್ಲದೆ ತನ್ನ ಚಿತ್ತದ ಉದ್ದೇಶಕ್ಕನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವಾತನು ತನ್ನ ಸಂಕಲ್ಪದ ಪ್ರಕಾರ ಮೊದಲೇ ನೇಮಿಸಲ್ಪಟ್ಟವರಾದ ನಮ್ಮನ್ನು ಕ್ರಿಸ್ತನಲ್ಲಿ ತನ್ನ ಸ್ವಕೀಯ ಜನರನ್ನಾಗಿ ಅರಿಸಿಕೊಂಡನು.

ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.