TSK

TSK · ಯೋಬನು 12:2

مراجع Treasury of Scripture Knowledge في ಕನ್ನಡ IRV.

العودة إلى المقطع

ನನಗೆ ಉಪದೇಶಮಾಡಿ ನನ್ನ ತಪ್ಪನ್ನು ನನಗೆ ತಿಳಿಯಪಡಿಸಿರಿ, ನಾನು ಮೌನದಿಂದಿರುವೆನು.

“ಬಹಳ ಮಾತುಗಳಿಗೆ ಉತ್ತರ ಕೊಡಬಾರದೋ? ವ್ಯರ್ಥವಾಗಿ ಮಾತನಾಡುವವ ನೀತಿವಂತನೆಂದು ಹೇಳಿಸಿಕೊಂಡಾನೇ?

ಕಾಡುಕತ್ತೆಯ ಮರಿಗೆ ನರಜನ್ಮವಾದರೆ ಅವಿವೇಕಿಯಾದ ಮನುಷ್ಯನು ವಿವೇಕವನ್ನು ಪಡೆಯುವನು.

ವಿವೇಕವು ಪ್ರವೇಶಿಸದಂತೆ; ಅವರ ಮನಸ್ಸನ್ನು, ಹೃದಯವನ್ನು ಮುಚ್ಚಿರುವೆ, ಹೀಗೆ ಅವರು ಜಯಶೀಲರಾಗದಂತೆ ತಡೆಯುವೆ.

ಏಕೆಂದರೆ ನಾನು ಅಪಮಾನಕರವಾದ ನಿನ್ನ ಖಂಡನೆಯನ್ನು ಕೇಳಿದ್ದೇನೆ, ಆದಕಾರಣ ನನ್ನ ಆತ್ಮವು ನನ್ನ ಬುದ್ಧಿಯಿಂದಲೇ ಕಲಿತ ಉತ್ತರವನ್ನು ನನಗೆ ತಿಳಿಸುತ್ತದೆ.

ಅದಕ್ಕೆ ಅವನು, “ಹೆಚ್ಚು ದಿನಗಳವರು ಮಾತನಾಡಲಿ, ಬಹಳ ವರ್ಷದವರು ಜ್ಞಾನೋಪದೇಶಮಾಡಲಿ” ಎಂದುಕೊಂಡಿದ್ದೆನು.

ಅಯ್ಯೋ, ತಮ್ಮನ್ನು ತಾವೇ ಜ್ಞಾನಿಗಳೆಂದೂ, ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಗತಿಯನ್ನು ಏನು ಹೇಳಲಿ!.

ನಿಮ್ಮನ್ನು ನಾಚಿಕೆಪಡಿಸುವುದಕ್ಕೆ ಇದನ್ನು ಹೇಳುತ್ತಿದ್ದೇನೆ. ತನ್ನ ಸಹೋದರರ ಮಧ್ಯದಲ್ಲಿ ನ್ಯಾಯವನ್ನು ಬಗೆಹರಿಸಬಲ್ಲವನಾದ ಬುದ್ಧಿವಂತನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?