TSK

TSK · ಯೋಬನು 13:14

مراجع Treasury of Scripture Knowledge في ಕನ್ನಡ IRV.

العودة إلى المقطع

ನೀವು ಸಹಾಯಮಾಡುವುದಿಲ್ಲವೆಂದು ತಿಳಿದು ಜೀವವನ್ನು ಕೈಯಲ್ಲಿ ಹಿಡಿದು ಅಮ್ಮೋನಿಯರೊಡನೆ ಯುದ್ಧಕ್ಕೆ ಹೋದೆನು. ಯೆಹೋವನು ಅವರನ್ನು ನನ್ನ ಕೈಗೆ ಒಪ್ಪಿಸಿದನು. ಹೀಗಿರಲು ನೀವು ಈಗ ಬಂದು ನನ್ನೊಡನೆ ಕಲಹಮಾಡುವುದೇಕೆ?” ಎಂದು ಉತ್ತರಿಸಿ,

ಆ ಸ್ತ್ರೀಯು ಸೌಲನ ಹತ್ತಿರ ಬಂದು ಅವನು ಬಹು ಭೀತನಾಗಿದ್ದಾನೆಂದು ಕಂಡು ಅವನಿಗೆ, “ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿದೆನು. ಕೈಯಲ್ಲಿ ಜೀವಹಿಡಿದವಳಾಗಿ ನಿನ್ನ ಅಪ್ಪಣೆಯನ್ನು ನೆರವೇರಿಸಿದೆನು.

ನನ್ನ ಜೀವವು ಅಪಾಯದಲ್ಲಿದ್ದೆ, ಆದರೂ ನಿನ್ನ ಧರ್ಮಶಾಸ್ತ್ರವನ್ನು ಮರೆಯುವುದಿಲ್ಲ.

ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು. ಎಡಗಡೆಯಲ್ಲಿರುವುದನ್ನು ತಿಂದರೂ ತೃಪ್ತಿಯಾಗುವುದಿಲ್ಲ. ಒಬ್ಬೊಬ್ಬನು ತನ್ನ ತೋಳಿನ ಮಾಂಸವನ್ನೇ ತಿನ್ನುವನು.