TSK

TSK · ಯೋಬನು 15:13

مراجع Treasury of Scripture Knowledge في ಕನ್ನಡ IRV.

العودة إلى المقطع

ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು, ಅವನ ಮುಖವು ಸಿಟ್ಟಿನಿಂದ ಕಳೆಗುಂದಿತು.

ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು. ಆತನ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?

ಕಳ್ಳರ ಗುಡಾರಗಳಾದರೋ ಸಮೃದ್ಧವಾಗಿರುವವು, ಕೈಯಲ್ಲಿರುವುದನ್ನೇ ದೇವರನ್ನಾಗಿ ಮಾಡಿಕೊಂಡು, ದೇವರನ್ನು ಕೋಪಕ್ಕೆ ಗುರಿಮಾಡುವವರು ಸುರಕ್ಷಿತರಾಗಿದ್ದಾರೆ ಎಂದು ತಿಳಿದಿರುವರು.

ಹಾಗಾದರೆ ಕೆಟ್ಟದ್ದಕ್ಕೆ ಹೋಗದಂತೆ ನಾಲಿಗೆಯನ್ನು ಕಾದುಕೋ; ವಂಚನೆಯ ಮಾತುಗಳಿಗೆ ಬಿಡದೆ ತುಟಿಗಳನ್ನು ಇಟ್ಟುಕೋ.

ಮನುಷ್ಯನಿಗೆ ಜೀವ ವರವಿರಲು ತನ್ನ ಪಾಪದ ಶಿಕ್ಷೆಗಾಗಿ ಗುಣುಗುಟ್ಟುವುದೇಕೆ?

¶ “ನೀವು ನನಗೆ ವಿರುದ್ಧವಾಗಿ ಆಡಿದ ಮಾತುಗಳು ಬಹಳ ಕಠಿಣ” ಎಂದು ಯೆಹೋವನು ಅನ್ನುತ್ತಾನೆ. “ನಿನಗೆ ವಿರುದ್ಧವಾಗಿ ಏನು ಮಾಡಿದ್ದೇವೆ?” ಅನ್ನುತ್ತೀರಾ?

ತನ್ನನ್ನು ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿಯು ವ್ಯರ್ಥವಾಗಿದೆ.