TSK

TSK · ಯೋಬನು 19:13

مراجع Treasury of Scripture Knowledge في ಕನ್ನಡ IRV.

العودة إلى المقطع

ಅಲ್ಲಿಗೆ ಸೇರಿ ಆಶಾಭಂಗಪಟ್ಟರು, ನಂಬಿದಷ್ಟೂ ನಿರೀಕ್ಷೆಗೆಟ್ಟರು.

ಆದರೆ ಈಗ ಆತನು ನನ್ನನ್ನು ಕುಂದಿಸಿದ್ದಾನೆ; (ದೇವಾ) ನೀನು ನನ್ನ ಬಳಗದವರನ್ನೆಲ್ಲಾ ಹಾಳು ಮಾಡಿದ್ದಿ.

ನನ್ನ ಎಲ್ಲಾ ಹಿಂಸಕರ ದೆಸೆಯಿಂದ ದೂಷಣೆಗೆ ಗುರಿಯಾದೆನು; ವಿಶೇಷವಾಗಿ ನೆರೆಯವರು ನನ್ನನ್ನು ನಿಂದಿಸುತ್ತಾರೆ. ನನ್ನ ಪರಿಚಿತರಿಗೆ ನನ್ನಲ್ಲಿ ಭೀತಿಯುಂಟಾಯಿತು; ನನ್ನನ್ನು ದಾರಿಯಲ್ಲಿ ಕಂಡವರೆಲ್ಲರು ಓರೆಯಾಗಿ ಹೋಗುತ್ತಾರೆ.

ನನ್ನ ಆಪ್ತಸ್ನೇಹಿತರು ಮತ್ತು ಜೊತೆಗಾರರು, ನನ್ನ ರೋಗವನ್ನು ನೋಡಿ ಓರೆಯಾಗಿ ಹೋಗುತ್ತಾರೆ; ನನ್ನ ಬಂಧುಗಳು ದೂರ ನಿಲ್ಲುತ್ತಾರೆ.

ನನ್ನ ಅಣ್ಣತಮ್ಮಂದಿರಿಗೆ ಅಪರಿಚಿತನಂತಾದೆನು; ಒಡಹುಟ್ಟಿದವರಿಗೆ ಪರದೇಶಿಯಂತೆ ಇದ್ದೇನೆ.

ನಿಂದೆಯಿಂದ ನಿರಾಶೆಗೊಂಡು ಕುಂದಿಹೋಗಿದ್ದೇನೆ. ಕರುಣಾಳುಗಳನ್ನು ನಿರೀಕ್ಷಿಸಿದೆ; ದೊರೆಯಲಿಲ್ಲ. ಸಂತೈಸುವವರನ್ನು ಹಾರೈಸಿದೆ; ಸಿಕ್ಕಲಿಲ್ಲ.

ನನ್ನ ಆಪ್ತಮಿತ್ರರನ್ನು ದೂರಮಾಡಿದಿ; ಅಂಧಕಾರವೇ ನನ್ನ ಒಡನಾಡಿ.

ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ.