TSK

TSK · ಯೋಬನು 19:21

مراجع Treasury of Scripture Knowledge في ಕನ್ನಡ IRV.

العودة إلى المقطع

ಅವರು ದೊಡ್ಡವರಾಗುವ ತನಕ ನೀವು ಕಾದಿರುವಿರೋ? ಅಲ್ಲಿಯ ವರೆಗೂ ಗಂಡಂದಿರಿಲ್ಲದೆ ಇರುವಿರೋ? ನನ್ನ ಮಕ್ಕಳೇ, ಹಾಗೆ ಮಾಡಬೇಡಿರಿ; ಯೆಹೋವನ ಹಸ್ತವು ನನ್ನಿಂದ ದೂರವಾಗಿರುವುದರಿಂದ ನಾನು ನಿಮಗಿಂತ ಹೆಚ್ಚಾಗಿ ದುಃಖಪಡುತ್ತೇನೆ” ಅಂದಳು.

ಆದರೆ ನಿನ್ನ ಕೈಚಾಚಿ ಅವನ ಅಸ್ತಿಮಾಂಸಗಳನ್ನು ಹೊಡೆ. ಆಗ ಅವನು ನಿನ್ನ ಮುಖದೆದುರಿಗೆ ನಿನ್ನನ್ನು ದೂಷಿಸದೆ ಬಿಡುವುದಿಲ್ಲ” ಎಂದನು.

ಸರ್ವಶಕ್ತನಾದ ದೇವರ ಬಾಣಗಳು ನನ್ನಲ್ಲಿ ನಾಟಿರುತ್ತವೆ, ನನ್ನ ಆತ್ಮವು ಅವುಗಳ ವಿಷವನ್ನು ಹೀರಿಕೊಳ್ಳುತ್ತದೆ; ದೇವರು ಕಳುಹಿಸಿದ ಅಪಾಯಗಳು ನನಗೆ ವಿರುದ್ಧವಾಗಿ ವ್ಯೂಹಕಟ್ಟಿವೆ.

ನಿನ್ನ ಬಾಣಗಳು ನನ್ನೊಳಗೆ ಹೊಕ್ಕಿವೆ; ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿದೆ.

ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂದು ತಿಳಿದು, ಅವರಿಗುಂಟಾದ ಶಾರೀರಿಕ ಕಷ್ಟಾನುಭವವು ನಿಮಗೂ ಸಂಭವಿಸಿತೆಂದು ಭಾವಿಸಿಕೊಂಡು, ಅವರನ್ನು ಜ್ಞಾಪಕಮಾಡಿಕೊಳ್ಳಿರಿ.