¶ ಯೋತಾಮನು ಇದನ್ನು ಕೇಳಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತು ಗಟ್ಟಿಯಾದ ಧ್ವನಿಯಿಂದ, “ಶೆಕೆಮಿನ ಜನರೇ, ನನ್ನ ಮಾತನ್ನು ಕೇಳಿರಿ; ಆಗ ದೇವರು ನಿಮ್ಮ ಮೊರೆಗೆ ಕಿವಿಗೊಡುವನು” ಎಂದನು.
TSK
TSK · ಯೋಬನು 21:2
مراجع Treasury of Scripture Knowledge في ಕನ್ನಡ IRV.
ಯೋಬನು 13:6
TSK
ದಯಮಾಡಿ ನನ್ನ ಆಕ್ಷೇಪಣೆಯನ್ನು ಕೇಳಿರಿ, ನನ್ನ ತುಟಿಗಳ ವಾದಕ್ಕೆ ಕಿವಿಗೊಡಿರಿ.
ಯೋಬನು 15:11
TSK
ದೇವರ ಆದರಣೆಗಳೂ, ನಿನಗೆ ದೊರೆತ ಶಾಂತಿಯ ಮಾತುಗಳೂ ಸಾಲುವುದಿಲ್ಲವೇ?
ಯೋಬನು 18:2
TSK
“ಇನ್ನೆಷ್ಟರವರೆಗೆ ಮಾತುಗಳನ್ನು ಹಿಡಿಯುವುದಕ್ಕೆ ಹೊಂಚು ಹಾಕುತ್ತಿರುವೆ? ಮೊದಲು ನೀನು ಆಲೋಚಿಸು, ಆ ಮೇಲೆ ಮಾತನಾಡೋಣ.
ಯೋಬನು 33:31
TSK
ಯೋಬನೇ, ನನ್ನ ಕಡೆಗೆ ಗಮನವಿಟ್ಟು ಕೇಳು, ಮೌನವಾಗಿರು, ನಾನೇ ಮಾತನಾಡುವೆನು.
ಯೆಶಾಯ 55:2
TSK
ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ಯರ್ಥ ಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವುದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೆಯದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.