TSK

TSK · ಯೋಬನು 21:25

مراجع Treasury of Scripture Knowledge في ಕನ್ನಡ IRV.

العودة إلى المقطع

ನಿನ್ನ ತಂದೆಯೂ ಮತ್ತು ಅವನ ಜನರೂ ಶೂರರಾಗಿದ್ದಾರೆ, ಈಗ ಅವರು ಮರಿಯನ್ನು ಕಳೆದುಕೊಂಡ ಕರಡಿಯಂತೆ ರೋಷವುಳ್ಳವರಾಗಿದ್ದಾರೆಂದು ನಿನಗೆ ಗೊತ್ತಿದೆ. ಇದಲ್ಲದೆ ಅವನು ಯುದ್ಧದಲ್ಲಿ ನಿಪುಣನು, ಜನರ ಮಧ್ಯದಲ್ಲಿ ರಾತ್ರಿ ಕಳೆಯುವವನಲ್ಲ.

ಕಷ್ಟದಲ್ಲಿರುವವನಿಗೆ ಬೆಳಕನ್ನು, ಮನನೊಂದವರಿಗೆ ಜೀವವನ್ನು ಕೊಡುವುದೇಕೆ?

ಉಸಿರಾಡಗೊಡಿಸದೆ ಕಹಿಯಾದ ಪದಾರ್ಥದಿಂದ ನನ್ನ ಹೊಟ್ಟೆಯನ್ನು ತುಂಬಿಸುತ್ತಾನೆ.

ಅವನ ಹೊಟ್ಟೆ ತುಂಬುವುದು, ಹೌದು, ದೇವರು ತನ್ನ ಕೋಪಾಗ್ನಿಯನ್ನು ಕಳುಹಿಸಿ; ಅದನ್ನೇ ಆಹಾರವನ್ನಾಗಿ ಅವನ ಮೇಲೆ ಸುರಿಸುವನು.

ಅದೇನೆಂದರೆ ದೇವರು ಒಬ್ಬನಿಗೆ ಯಾವ ಇಷ್ಟಾರ್ಥಕ್ಕೂ ಕೊರತೆಯಿಲ್ಲದಂತೆ ಧನವನ್ನು, ಸಂಪತ್ತನ್ನು ಹಾಗು ಘನತೆಯನ್ನು ಅನುಗ್ರಹಿಸುವನು. ಆದರೆ ಅದನ್ನು ಅನುಭವಿಸುವುದಕ್ಕೆ ದೇವರು ಅವನನ್ನು ಶಕ್ತಿಗೊಳಿಸುವುದಿಲ್ಲ. ಅದನ್ನು ಮತ್ತೊಬ್ಬನು ಅನುಭವಿಸುವನು. ಇದು ಸಹ ವ್ಯರ್ಥವೂ, ದುಃಖಕರವಾದ ಕೆಟ್ಟತನವೂ ಆಗಿದೆ.

¶ ಇದಲ್ಲದೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನಾನು ಯೆರೂಸಲೇಮಿನಲ್ಲಿ ಆಹಾರ ಸರಬರಾಜನ್ನು ನಿಲ್ಲಿಸಿಬಿಡುವೆನು. ನಿವಾಸಿಗಳು ಅನ್ನವನ್ನು ತೂಕದ ಪ್ರಕಾರ ಕಳವಳದಿಂದ ತಿನ್ನುವರು, ನೀರನ್ನು ಅಳತೆಯ ಪ್ರಕಾರ ನಡುಗುತ್ತಾ ಕುಡಿಯುವರು.