TSK

TSK · ಯೋಬನು 21:28

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನು ಇಸ್ರಾಯೇಲರ ಸಮೂಹದವರಿಗೆ, “ನೀವು ಈ ದುಷ್ಟರ ಡೇರೆಗಳ ಬಳಿಯಲ್ಲಿ ಇರದೆ ದೂರ ಹೋಗಬೇಕು; ಇವರ ಸೊತ್ತಿನಲ್ಲಿ ಯಾವುದನ್ನೂ ಮುಟ್ಟಬಾರದು; ಇವರ ದೋಷಗಳಿಗಾಗಿ ಉಂಟಾಗುವ ಶಿಕ್ಷೆ ನಿಮ್ಮನ್ನೂ ಕೊಚ್ಚಿಕೊಂಡು ಹೋದೀತು” ಎಂದು ಹೇಳಿದನು.

ನಿನ್ನ ಶತ್ರುಗಳನ್ನು ಅವಮಾನವು ಮುಸುಕುವುದು; ದುಷ್ಟರ ನಿವಾಸವು ನಿರ್ಮೂಲವಾಗುವುದು.”

ತನ್ನ ಮಲದ ಹಾಗೆ ನಿತ್ಯನಾಶನವನ್ನೂ ಹೊಂದುವನು, ಅವನನ್ನು ಕಂಡವರು ಕೂಡ ‘ಅವನು ಎಲ್ಲಿ?’ ಎನ್ನುವರು.

ಪ್ರಭುವಿನಂತೆ ಆತನ ಸಾನ್ನಿಧ್ಯದಲ್ಲಿ ಪ್ರವೇಶಿಸಿ ನನ್ನ ಹೆಜ್ಜೆಗಳ ಲೆಕ್ಕವನ್ನು, ಆತನಿಗೆ ಅರಿಕೆಮಾಡಿಕೊಳ್ಳುತ್ತಿದ್ದೆನು.

ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿಬಿಡುವನು; ನಿನ್ನನ್ನು ಹಿಡಿದು ಗುಡಾರದೊಳಗಿಂದ ಕಿತ್ತು ಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು.

ನಾನು ಶಾಪವನ್ನು ಕಳುಹಿಸುತ್ತೇನೆ. ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನನ್ನ ಅಪ್ಪಣೆಯಂತೆ ಅದು ಕಳ್ಳನ ಮನೆಯಲ್ಲಿಯೂ, ನನ್ನ ಹೆಸರೆತ್ತಿ ಸುಳ್ಳು ಸಾಕ್ಷಿಹೇಳುವವನ ಮನೆಯೊಳಗೆ ನುಗ್ಗಿ ಮತ್ತು ಅವನ ಮನೆಯಲ್ಲಿನ ಮರಗಳನ್ನೂ, ಅದರ ಕಲ್ಲುಗಳನ್ನೂ ನಾಶಮಾಡುವುದು’” ಎಂದು ಹೇಳಿದನು.