ಹಿಂಸಕನಿಗೆ ಎಷ್ಟು ವರ್ಷಗಳು ನೇಮಕವಾಗಿವೆಯೋ, ಅಷ್ಟು ಕಾಲವೂ ಆ ದುಷ್ಟನು ಪೀಡಿತನಾಗಿಯೇ ಇರುವನು.
TSK
TSK · ಯೋಬನು 27:13
مراجع Treasury of Scripture Knowledge في ಕನ್ನಡ IRV.
ದುಷ್ಟನಿಗೆ ದೇವರಿಂದ ದೊರೆಯುವ ಪಾಲೂ, ದೇವರು ನೇಮಿಸಿರುವ ಸ್ವಾಸ್ತ್ಯವೂ ಇವೇ.”
ಆತನು ಅನ್ಯಾಯಗಾರರಿಗೆ ವಿಪತ್ತನ್ನೂ, ಕೆಡುಕರಿಗೆ ಉಪದ್ರವವನ್ನೂ ಕೊಡುತ್ತಾನಲ್ಲವೆ?
ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ.
ಆದರೆ ದುಷ್ಟನಿಗೆ ಒಳ್ಳೆಯದಾಗುವುದಿಲ್ಲ. ನೆರಳಿನಂತಿರುವ ಅವನ ದಿನಗಳು ಹೆಚ್ಚುವುದಿಲ್ಲ. ಏಕೆಂದರೆ ಅವನು ದೇವರಿಗೆ ಭಯಪಡುವುದಿಲ್ಲ.
“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.