TSK

TSK · ಯೋಬನು 32:13

مراجع Treasury of Scripture Knowledge في ಕನ್ನಡ IRV.

العودة إلى المقطع

“ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವುದನ್ನೂ ನಾನು ತೆಗೆದುಕೊಳ್ಳುವುದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರಾಗಿರುವ ಯೆಹೋವನ ಕಡೆಗೆ ಕೈ ಎತ್ತಿ ಪ್ರಮಾಣಮಾಡುತ್ತೇನೆ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವುದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.’

“ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿಹೋಗುವೆನು; ನನಗಿರುವುದನ್ನೆಲ್ಲ ಯೆಹೋವನೇ ಕೊಟ್ಟನು, ಅವುಗಳನ್ನು ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ” ಎಂದು ಹೇಳಿದನು.

ದೇವರ ಶ್ವಾಸದಿಂದ ನಾಶವಾಗುತ್ತಾರೆ. ಆತನ ಸಿಟ್ಟೆಂಬ ಗಾಳಿಯಿಂದ ಹಾಳಾಗುತ್ತಾರೆ.

“ಹೌದು, ನೀವೇ ಮನುಷ್ಯರು; ಜ್ಞಾನವು ನಿಮ್ಮೊಡನೆಯೇ ಸಾಯುವುದು, ನಿಜ.

ಹೀಗಾದರೆ ನನ್ನ ನ್ಯಾಯವನ್ನು ತಿರುಗಿಸಿಬಿಟ್ಟು ನನ್ನ ಸುತ್ತಲೂ ತನ್ನ ಬಲೆಯನ್ನೊಡ್ಡಿದವನು ದೇವರೇ ಎಂದು ತಿಳಿದುಕೊಳ್ಳಿರಿ.

ಅಯ್ಯೋ, ತಮ್ಮನ್ನು ತಾವೇ ಜ್ಞಾನಿಗಳೆಂದೂ, ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಗತಿಯನ್ನು ಏನು ಹೇಳಲಿ!.

ಈಗಲೇ ಉಂಟಾಗುತ್ತಿವೆ, ಪುರಾತನಕಾಲದಲ್ಲಿ ಆಗಿಲ್ಲ, “ಮೊದಲೇ ನಾನು ತಿಳಿದುಕೊಂಡಿದ್ದೆನು” ಎಂದು, ನೀನು ಅಂದುಕೊಳ್ಳದ ಹಾಗೆ ಈ ದಿನಕ್ಕೆ ಮೊದಲು ನಾನು ನಿನಗೆ ಕೇಳಗೊಡಿಸಲಿಲ್ಲ.

¶ “ಇಗೋ, ನೀನು ದಾನಿಯೇಲನಿಗಿಂತಲೂ ಜ್ಞಾನಿಯಾಗಿರುವೆಯಾ; ನಿನಗೆ ರಹಸ್ಯವಾದುದು ಯಾವುದೇ ಇದ್ದರು ನಿನಗೆ ಮರೆಯಾಗಿರುವುದಿಲ್ಲ?

ಅದಕ್ಕೆ ಯೇಸು, ‹“ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ”› ಎಂದು ಉತ್ತರ ಕೊಟ್ಟನು.

ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು.