TSK

TSK · ಯೋಬನು 37:2

مراجع Treasury of Scripture Knowledge في ಕನ್ನಡ IRV.

العودة إلى المقطع

ಮೂರನೆಯ ದಿನದಲ್ಲಿ ಸೂರ್ಯೋದಯವಾಗಲು ಆ ಬೆಟ್ಟದ ಮೇಲೆ ಗುಡುಗು, ಮಿಂಚೂ, ಕಾರ್ಮುಗಿಲೂ, ತುತ್ತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯಲ್ಲಿದ್ದ ಜನರೆಲ್ಲರೂ ನಡುಗಿದರು.

ಆಹಾ, ಮೇಘಗಳ ಹರಡುವಿಕೆಯನ್ನೂ, ಆತನ ಗುಡಾರದಲ್ಲಿನ ಗರ್ಜನೆಗಳನ್ನೂ ಯಾರು ಗ್ರಹಿಸಬಲ್ಲರು?

ದೇವರು ತನ್ನ ಧ್ವನಿಯಿಂದ ಅದ್ಭುತವಾಗಿ ಗುಡುಗುವನು; ನಾವು ಗ್ರಹಿಸಲಾಗದ ಮಹಾಕಾರ್ಯಗಳನ್ನು ನಡೆಸುವನು.

ನಿನ್ನ ಕೈಯೂ, ದೇವರ ಕೈಯೂ ಸಮವೋ? ದೇವರ ಧ್ವನಿಯಂತೆ ಗುಡುಗಬಲ್ಲಿಯಾ?

ನೀನು ಗದರಿಸಲು ಅದು ಓಡಿಹೋಯಿತು; ನಿನ್ನ ಗರ್ಜನೆಗೆ ಹೆದರಿ ನೀನು ನೇಮಿಸಿದ ಸ್ಥಳಕ್ಕೆ ಹೋಗಲು,