TSK

TSK · ಯೋಬನು 4:6

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ, ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದನು.

ಆಹಾ, ಆತನು ನನ್ನನ್ನು ಕೊಲ್ಲುವನು, ಅದಕ್ಕಾಗಿ ಕಾದಿರುತ್ತೇನೆ, ಆದರೂ ನನ್ನ ನಡತೆಯ ಒಳ್ಳೆಯತನವನ್ನು ಆತನ ಮುಂದೆ ಸ್ಥಾಪಿಸುವೆನು.

ನನ್ನ ನಿರೀಕ್ಷೆ ಎಂಥದು? ನನ್ನ ನಿರೀಕ್ಷೆಯನ್ನು ಯಾರು ನೋಡುವರು?

ನೀವು ನ್ಯಾಯವಂತರೆಂದು ನಾನು ಒಪ್ಪುವುದು ಅಸಾಧ್ಯ. ಸಾಯುವ ತನಕ ನನ್ನ ಯಥಾರ್ಥತ್ವವನ್ನು ಬಿಡುವುದಿಲ್ಲ.

“ಕನ್ಯೆಯನ್ನು ಕೆಟ್ಟದೃಷ್ಟಿಯಿಂದ ನೋಡುವುದಿಲ್ಲ ಎಂದು ನನ್ನ ಕಣ್ಣುಗಳೊಡನೆ ನಿಬಂಧನೆಯನ್ನು ಮಾಡಿಕೊಂಡಿದ್ದೇನೆ,

ಯೆಹೋವನು ನಿನ್ನ ಭರವಸಕ್ಕೆ ಆಧಾರನಾಗಿದ್ದು, ನಿನ್ನ ಕಾಲು ಮೋಸದ ಬಲೆಗೆ ಸಿಕ್ಕದಂತೆ ನಿನ್ನನ್ನು ಕಾಪಾಡುವನು.

ಜ್ಞಾನವೂ, ತಿಳಿವಳಿಕೆಯೂ, ರಕ್ಷಣಾಕಾರ್ಯದ ಸಮೃದ್ಧಿಯೂ ಇರುವುದರಿಂದ ನಿನ್ನ ಕಾಲದಲ್ಲಿ ಸ್ಥೈರ್ಯವಿರುವುದು; ಯೆಹೋವನ ಮೇಲಣ ಭಯಭಕ್ತಿಯು ನಿನಗೆ ನಿಧಿಯಾಗುವುದು.

¶ ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.