TSK

TSK · ಯೋಬನು 4:9

مراجع Treasury of Scripture Knowledge في ಕನ್ನಡ IRV.

العودة إلى المقطع

ನಿನ್ನ ಮೂಗಿನ ಶ್ವಾಸದಿಂದ ಸಮುದ್ರದ ನೀರು ಒಟ್ಟುಗೂಡಿದವು; ಪ್ರವಾಹವು ಗೋಡೆಯೋಪಾದಿಯಲ್ಲಿ ನಿಂತುಕೊಂಡಿತು; ಸಾಗರದಾಳದೊಳಗಿನ ನೀರು ಗಟ್ಟಿಯಾಯಿತು.

ಆದುದರಿಂದ, ನಾನು ಅವನ ಮೇಲೆ ಭಯದ ಆತ್ಮವನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಹೋಗಿ ಅಲ್ಲಿ ಕತ್ತಿಯಿಂದ ನಾಶವಾಗುವಂತೆ ಮಾಡುವೆನು’ ಎಂಬುದಾಗಿ ಯೆಹೋವನು ನಿಮ್ಮ ಯಜಮಾನನಿಗೆ ಹೇಳುತ್ತಾನೆ” ಎಂದು ಉತ್ತರಕೊಟ್ಟನು.

ಕತ್ತಲೊಳಗಿಂದ ಅವನು ಪಾರಾಗುವುದಿಲ್ಲ, ಕಿಚ್ಚು ಅವನ ಕೊಂಬೆಗಳನ್ನು ಒಣಗಿಸುವುದು, ದೇವರ ಶ್ವಾಸದಿಂದ ಒಣಗಿ ಹೋಗುವನು.

ಆಗ ಯೆಹೋವನೇ, ನಿನ್ನ ಗದರಿಕೆಯಿಂದಲೂ, ನಿನ್ನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ತಿವಾರಗಳು ಕಂಡುಬಂದವು.

ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ. ಹೌದು, ರಾಜನಿಗೆ ಅದು ಸಿದ್ಧವಾಗಿದೆ. ಅದನ್ನು ಆಳವಾಗಿಯೂ, ಅಗಲವಾಗಿಯೂ ಮಾಡಿದ್ದಾನೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಮರದಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.

‹ಆದ್ದರಿಂದ ನೀನು ಪಶ್ಚಾತ್ತಾಪಪಟ್ಟು ತಿರುಗಿಕೊಳ್ಳದಿದ್ದರೆ›‹ನಾನು ಬೇಗನೆ ನಿನ್ನ ಬಳಿಗೆ ಬಂದು›‹ನನ್ನ ಬಾಯಿಂದ ಹೊರಬರುವ ಕತ್ತಿಯಿಂದ›‹ಅವರ ಮೇಲೆ ಯುದ್ಧ ಮಾಡುವೆನು.›