TSK

TSK · ಯೋಬನು 40:8

مراجع Treasury of Scripture Knowledge في ಕನ್ನಡ IRV.

العودة إلى المقطع

“ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿದೆ, ದೇವರು ಊದಿದ ಶ್ವಾಸವು ನನ್ನ ಮೂಗಿನಲ್ಲಿ ಇನ್ನೂ ಆಡುತ್ತಿದೆ (ಕೇಳಿರಿ)!

ಆಮೇಲೆ ಬೂಜ್ ಕುಲಕ್ಕೂ, ರಾಮ್ ಗೋತ್ರಕ್ಕೂ ಸೇರಿದ ಬರಕೇಲನ ಮಗನಾದ ಎಲೀಹುವಿಗೆ ಸಿಟ್ಟೇರಿತು; ಯೋಬನು ದೇವರಿಗಿಂತಲೂ ತಾನೇ ನ್ಯಾಯವಂತನೆಂದು ಎಣಿಸಿಕೊಂಡಿದ್ದರಿಂದ ಅವನ ಮೇಲೆ ಎಲೀಹುವಿಗೆ ಸಿಟ್ಟು ಬಂತು.

ನ್ಯಾಯವನ್ನು ದ್ವೇಷಿಸುವವನು ಆಳ್ವಿಕೆ ಮಾಡಾನೇ? ಧರ್ಮಸ್ವರೂಪನೂ, ಮಹಾಶಕ್ತನೂ ಆಗಿರುವಾತನನ್ನು ಕೆಟ್ಟವನೆಂದು ನಿರ್ಣಯಿಸುವೆಯಾ?

ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ.

ಮೃತ್ಯುವಿನಿಂದ ನೀವು ಪಡೆದುಕೊಂಡ ಒಡಂಬಡಿಕೆಯು ಸಾಗದು, ಪಾತಾಳದೊಡನೆ ನೀವು ಮಾಡಿಕೊಂಡ ಒಪ್ಪಂದವು ನಿಲ್ಲದು; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ನಿಮ್ಮನ್ನು ತುಳಿದುಬಿಡುವುದು.

ಬದಲಾಗಿ, “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ.

¶ ನಾನು ಹೇಳಬಯಸುವುದೇನೆಂದರೆ, ದೇವರು ಮೊದಲು ಅನುಮೋದಿಸಿದ ಒಡಂಬಡಿಕೆಯನ್ನು, ನಾನೂರ ಮೂವತ್ತು ವರ್ಷಗಳ ನಂತರ ಬಂದ ಮೋಶೆಯ ಧರ್ಮಶಾಸ್ತ್ರವು ಅದನ್ನು ನಿರರ್ಥಕಗೊಳಿಸಿ, ಆ ವಾಗ್ದಾನವನ್ನು ಬರಿದಾಗಿಮಾಡಲು ಸಾಧ್ಯವಿಲ್ಲ.