ಆದಿಕಾಂಡ 1:2
TSK
ಭೂಮಿಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲಿತ್ತು. ದೇವರಾತ್ಮವು ಸಾಗರದ ಮೇಲೆ ಚಲಿಸುತ್ತಿತ್ತು.
TSK
مراجع Treasury of Scripture Knowledge في ಕನ್ನಡ IRV.
ಭೂಮಿಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲಿತ್ತು. ದೇವರಾತ್ಮವು ಸಾಗರದ ಮೇಲೆ ಚಲಿಸುತ್ತಿತ್ತು.
ನೀನಂತೂ ಸಮಾಧಾನದೊಡನೆ ಪೂರ್ವಿಕರ ಬಳಿಗೆ ಸೇರುವಿ, ಬಹಳ ವೃದ್ಧನಾಗಿ ಉತ್ತರಕ್ರಿಯೆಯನ್ನು ಹೊಂದುವಿ.
¶ ಆದರೆ ಯಾಕೋಬನು ಅವರಿಗೆ, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದವನು ಸತ್ತು ಹೋದನು. ಇವನೊಬ್ಬನೇ ಉಳಿದಿದ್ದಾನೆ. ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿ ತಲೆ ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ” ಎಂದು ಹೇಳಿದನು.
ಎಂದಾದರೂ ಸಮುದ್ರದ ಬುಗ್ಗೆಗಳೊಳಗೆ ಸೇರಿದ್ದೆಯೋ? ಭೂಮಿಯ ಕೆಳಗಣ ಸಾಗರದ ಗುಪ್ತ ಪ್ರದೇಶಗಳಲ್ಲಿ ತಿರುಗಾಡಿದ್ದೀಯೋ?
ನರೆಗೂದಲೇ ಸುಂದರ ಕಿರೀಟವು, ಅದು ಧರ್ಮಮಾರ್ಗದಲ್ಲಿ ದೊರಕುವುದು.