TSK

TSK · ಯೋಬನು 41:4

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು.

ನೀವು ದಬ್ಬಳದಿಂದ ಅವನ ಕಿವಿಯನ್ನು ಚುಚ್ಚಿ, ಕದಕ್ಕೆ ಸಿಕ್ಕಿಸಬೇಕು. ಆ ದಿನದಿಂದ ಅವನು ನಿಮಗೆ ಶಾಶ್ವತ ದಾಸನಾಗಿರಬೇಕು. ಅದೇ ರೀತಿಯಾಗಿ ದಾಸಿಯರ ವಿಷಯದಲ್ಲಿಯೂ ನಡೆದುಕೊಳ್ಳಬೇಕು.

ಅವನನ್ನು ದೇವರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ.