TSK

TSK · ಯೋಬನು 6:8

مراجع Treasury of Scripture Knowledge في ಕನ್ನಡ IRV.

العودة إلى المقطع

ತರುವಾಯ ತಾನೊಬ್ಬನೇ ಅರಣ್ಯದೊಳಗೆ ಒಂದು ದಿನದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀ ಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು, “ಯೆಹೋವನೇ ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಬಿಡು. ನಾನು ನನ್ನ ಪೂರ್ವಿಕರಿಗಿಂತ ಉತ್ತಮನಲ್ಲ” ಎಂದು ದೇವರನ್ನು ಪ್ರಾರ್ಥಿಸಿ ಅದೇ ಗಿಡದ ಕೆಳಗೆ ಮಲಗಿಕೊಂಡು ನಿದ್ರೆ ಮಾಡಿದನು.

ಸಮಾಧಿಗೆ ಸೇರುವಾಗ ಬಹಳವಾಗಿ ಹರ್ಷಿಸಿ ಉಲ್ಲಾಸಪಡುತ್ತಾರೆ.

ನನ್ನ ಜೀವವೇ ನನಗೆ ಬೇಸರವಾಗಿದೆ. ಎದೆಬಿಚ್ಚಿ ಮೊರೆಯಿಡುವೆನು; ಮನೋವ್ಯಥೆಯಿಂದ ನುಡಿಯುವೆನು.

ನಿನ್ನ ರಕ್ಷಣೆಯ ಬಯಕೆಯಿಂದಲೇ ನನ್ನ ಮನವು ಬಲಗುಂದಿತು, ನಾನು ನಿನ್ನ ವಾಕ್ಯದಲ್ಲೇ ನಿರೀಕ್ಷೆಯುಳ್ಳವನಾಗಿದ್ದೇನೆ.