TSK

TSK · ಯೋಬನು 8:2

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆಗ ಫರೋಹನ ಪರಿವಾರದವರು ಅವನಿಗೆ, “ಈ ಮನುಷ್ಯನು ಇನ್ನು ಎಷ್ಟು ದಿನ ನಮಗೆ ಉರುಲಾಗಿರಬೇಕು. ಆ ಜನರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸುವುದಕ್ಕೆ ಅಪ್ಪಣೆಕೊಡು. ಐಗುಪ್ತ ದೇಶವು ಹಾಳಾಯಿತೆಂದು ಇನ್ನು ನಿನ್ನ ಮನಸ್ಸಿಗೆ ಬರಲಿಲ್ಲವೋ?” ಎಂದು ಹೇಳಿದರು.

ನಾನು ನಾಶವಾಗುವುದು ದೇವರಿಗೆ ಮೆಚ್ಚಿಕೆಯಾಗುವುದಾದರೆ, ತನ್ನ ಕೈ ಚಾಚಿ ನನ್ನನ್ನು ಸಂಹರಿಸಿದರೆ ಒಳ್ಳೆಯದು.

ನಾನಂತೂ ಬಾಯಿಮುಚ್ಚುವುದಿಲ್ಲ; ಆತ್ಮವೇದನೆಯಿಂದ ಮಾತನಾಡುವೆನು, ಮನೋವ್ಯಥೆಯಿಂದ ಪ್ರಲಾಪಿಸುವೆನು.

“ಜ್ಞಾನಿಯು ತನ್ನ ಹೊಟ್ಟೆಯಲ್ಲಿ ಮೂಡಣ ಗಾಳಿಯನ್ನು ತುಂಬಿಕೊಂಡು, ಶೂನ್ಯವಾದ ತಿಳಿವಳಿಕೆಯಿಂದ ಮಾತನಾಡಬಹುದೇ?

“ಇನ್ನೆಷ್ಟರವರೆಗೆ ಮಾತುಗಳನ್ನು ಹಿಡಿಯುವುದಕ್ಕೆ ಹೊಂಚು ಹಾಕುತ್ತಿರುವೆ? ಮೊದಲು ನೀನು ಆಲೋಚಿಸು, ಆ ಮೇಲೆ ಮಾತನಾಡೋಣ.

“ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?