TSK

TSK · ಯೋಬನು 9:32

مراجع Treasury of Scripture Knowledge في ಕನ್ನಡ IRV.

العودة إلى المقطع

ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?

ನಾನಾದರೋ ದೇವರೊಂದಿಗೆ ವಾದಿಸಿ, ಆತನಿಗೆ ಉತ್ತರಕೊಡುವುದಕ್ಕೆ ಮತ್ತೂ ಅಶಕ್ತನು.

ಇಗೋ, ನನ್ನ ನ್ಯಾಯವನ್ನು ಸಿದ್ಧಪಡಿಸಿದ್ದೇನೆ; ನಾನು ನೀತಿವಂತನೆಂಬುದಾಗಿ ನಿರ್ಣಯವಾಗುವುದೆಂದು ನನಗೆ ಗೊತ್ತೇ ಇದೆ.

ಇಗೋ, ನನ್ನ ಭೀತಿಯು ನಿನ್ನನ್ನು ಹೆದರಿಸಲಾರದು, ನನ್ನ ಒತ್ತಾಯವು ನಿನಗೆ ಹೊರೆಯಾಗಿರದು.

ಕಣ್ಣೆತ್ತಿ ಗಗನಮಂಡಲವನ್ನು ನೋಡು, ಮೇಘಮಾರ್ಗವನ್ನು ದೃಷ್ಟಿಸು, ಅವು ನಿನಗಿಂತ ಎಷ್ಟೋ ಎತ್ತರವಾಗಿವೆ!

ಮನುಷ್ಯನು ಎಂಥವನಾದರೂ ಪೂರ್ವದಲ್ಲಿ ಅವನಿಗೆ ವಿಧಿಸಲ್ಪಟ್ಟ ಹೆಸರಿನಿಂದ ಅವನು ಮಣ್ಣಿನವನೇ ಎಂದು ಗೊತ್ತಾಗಿದೆ. ತನಗಿಂತ ಬಲಿಷ್ಠನ ಸಂಗಡ ಹೋರಾಡಲಾರನು.

ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?

ಏಕೆಂದರೆ ನಮ್ಮ ಹೃದಯವು ಯಾವ ವಿಷಯದಲ್ಲಾದರು ನಮ್ಮನ್ನು ದೋಷಿಗಳೆಂದು ನಿರ್ಣಯಿಸಿದರೆ, ದೇವರು ನಮ್ಮ ಹೃದಯವನ್ನು ಬಲ್ಲವನಾಗಿರುವುದರಿಂದ ನಮ್ಮ ಹೃದಯವನ್ನು ಆತನಲ್ಲಿ ದೃಢಪಡಿಸಬಹುದು.