TSK

TSK · ಯೋಬನು 9:7

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯೆಹೋವನು ಅಮೋರಿಯರನ್ನು ಇಸ್ರಾಯೇಲ್ಯರಿಗೆ ಒಪ್ಪಿಸಿದ ದಿನದಲ್ಲಿ ಯೆಹೋಶುವನು ಯೆಹೋವನಲ್ಲಿ ಒಂದು ವಿಜ್ಞಾಪನೆ ಮಾಡಿಕೊಂಡನು. “ಸೂರ್ಯನೇ, ನೀನು ಗಿಬ್ಯೋನಿನಲ್ಲೇ ನಿಲ್ಲು; ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲೇ ನಿಲ್ಲು” ಎಂದು ಇಸ್ರಾಯೇಲ್ಯರ ಸಮಕ್ಷಮದಲ್ಲಿ ಆಜ್ಞಾಪಿಸಿದನು.

ಆತನು ತನ್ನ ಕೆಲಸವನ್ನು ಎಲ್ಲರೂ ತಿಳಿದುಕೊಳ್ಳಬೇಕೆಂದು, ಪ್ರತಿಯೊಬ್ಬನ ಕೈಗಳನ್ನು ಬಲಪಡಿಸುತ್ತಾನೆ.

ಬೆಳಕಿನ ನಿವಾಸಕ್ಕೆ ಹೋಗುವ ದಾರಿ ಎಲ್ಲಿ? ಕತ್ತಲಿನ ಸ್ವಸ್ಥಳವು ಎಲ್ಲಿ?

ಫರೋಹನನೇ, ಆಗ ನಾನು ನಿನ್ನ ಬೆಳಕನ್ನು ನಂದಿಸುವಾಗ, ಆಕಾಶಕ್ಕೆ ಮುಸುಕುಹಾಕಿ, ಅಲ್ಲಿನ ನಕ್ಷತ್ರಗಳನ್ನು ಮಸುಕುಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು, ಚಂದ್ರನೂ ಪ್ರಕಾಶಿಸನು.

ಇಗೋ, ಪರ್ವತಗಳನ್ನು ರೂಪಿಸಿ, ಗಾಳಿಯನ್ನು ನಿರ್ಮಿಸಿ, ತನ್ನ ಸಂಕಲ್ಪವನ್ನು ಮನುಷ್ಯರಿಗೆ ವ್ಯಕ್ತಗೊಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ ಮತ್ತು ಭೂಮಿಯ ಉನ್ನತ ಪ್ರದೇಶಗಳನ್ನು ತುಳಿದುಬಿಡುವಾತನು” ಸೇನಾಧೀಶ್ವರ ದೇವರಾದ ಯೆಹೋವನೆಂಬುದೇ ನನ್ನ ನಾಮಧೇಯ.

¶ ‹“ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.›