TSK

TSK · ಯೋವೇಲ 1:9

مراجع Treasury of Scripture Knowledge في ಕನ್ನಡ IRV.

العودة إلى المقطع

ನಮಗಾದರೋ ಯೆಹೋವನು ದೇವರಾಗಿರುತ್ತಾನೆ; ನಾವು ಆತನನ್ನು ಬಿಡಲಿಲ್ಲ. ಯೆಹೋವನ ಆರಾಧನೆ ನಡೆಸಲು ಆರೋನನ ಸಂತಾನದವರಾದ ಯಾಜಕರೂ, ತಮಗೆ ನೇಮಕವಾದ ಕೆಲಸದಲ್ಲಿ ನಿರತರಾದ ಲೇವಿಯರೂ ನಮಗಿದ್ದಾರೆ.

ಯಾರೂ ಮಹೋತ್ಸವಗಳಿಗೆ ಬಾರದೆ ಇರುವುದರಿಂದ ಚೀಯೋನಿಗೆ ಹೋಗುವ ದಾರಿಗಳು ಬಿಕೋ ಎನ್ನುತ್ತಿವೆ; ಅದರ ಬಾಗಿಲುಗಳೆಲ್ಲಾ ಹಾಳು ಬಿದ್ದಿವೆ, ಅಲ್ಲಿನ ಯಾಜಕರು ನರಳಾಡುತ್ತಾರೆ; ಅಲ್ಲಿನ ಕನ್ಯೆಯರು ವ್ಯಥೆಪಡುತ್ತಾರೆ, ನಗರಿಗೆ ನಗರಿಯೇ ಶೋಕದಿಂದ ತುಂಬಿದೆ.

ಯೆಹೋವನಿಗೆ ದ್ರಾಕ್ಷಾರಸವನ್ನು ನೈವೇದ್ಯವಾಗಿ ಸುರಿಯರು, ಅವರ ಯಜ್ಞಗಳು ಆತನಿಗೆ ಮೆಚ್ಚಿಕೆಯಾಗುವುದಿಲ್ಲ. ಅವರ ಆಹಾರವು ಸತ್ತವರ ಮನೆಯ ಆಹಾರದಂತಿರುವುದು; ಅದನ್ನು ತಿನ್ನುವವರೆಲ್ಲರೂ ಅಶುದ್ಧರಾಗುವರು, ಅದು ಅವರ ಹೊಟ್ಟೆತುಂಬುವುದಕ್ಕೆ ಮಾತ್ರ ಅನುಕೂಲವಾಗುವುದು, ಅದು ಯೆಹೋವನ ಆಲಯಕ್ಕೆ ಬರಲು ಯೋಗ್ಯವಲ್ಲ.

ನಮ್ಮ ಆಹಾರವು ನಮ್ಮ ಕಣ್ಣೆದುರಿಗೆ ಹಾಳಾಯಿತಲ್ಲಾ, ಸಂತೋಷವೂ ಹಾಗೂ ಉಲ್ಲಾಸವೂ ನಮ್ಮ ದೇವರ ಆಲಯವನ್ನು ಬಿಟ್ಟುಹೋಯಿತ್ತಲ್ಲಾ!

ಯೆಹೋವನ ಸೇವಕರಾದ ಯಾಜಕರು, ದ್ವಾರಮಂಟಪಕ್ಕೂ, ಯಜ್ಞವೇದಿಯ ನಡುವೆ ಅಳುತ್ತಾ ಹೀಗೆ ಹೇಳಲಿ, “ಯೆಹೋವನೇ, ನಿನ್ನ ಜನರನ್ನು ಕರುಣಿಸು, ಅನ್ಯಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು.”