TSK

TSK · ಯೋವೇಲ 2:12

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆಗ ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ, ಪೂರ್ಣ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು.

¶ ಆಗ ಇಸ್ರಾಯೇಲ್ಯರೆಲ್ಲರೂ, ಎಲ್ಲಾ ಜನರೂ ಬೇತೇಲಿಗೆ ಹೋಗಿ ಅಲ್ಲಿ ಯೆಹೋವನ ಮುಂದೆ ಅಳುತ್ತಾ ಬಿದ್ದು ಸಾಯಂಕಾಲದ ವರೆಗೆ ಉಪವಾಸಮಾಡಿದರು. ಅಲ್ಲಿ ಅವರು ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು.

ಅವರು ಅಲ್ಲಿ ಕೂಡಿಬಂದು, ನೀರು ಸೇದಿ, ಯೆಹೋವನ ಮುಂದೆ ಹೊಯ್ದು, ಆ ದಿನ ಉಪವಾಸವಿದ್ದು, “ನಾವು ನಿನಗೆ ದ್ರೋಹಿಗಳಾಗಿದ್ದೇವೆ” ಎಂದು ಯೆಹೋವನಿಗೆ ಅರಿಕೆಮಾಡಿದರು. ಆನಂತರ ಸಮುವೇಲನು ನ್ಯಾಯಪಾಲಕನಾಗಿದ್ದು, ಮಿಚ್ಪೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು.

ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಆರಿಸಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗೋಸ್ಕರ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು,

ನಿನ್ನ ಕಡೆಗೆ ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ತಿರುಗಿ, ನೀನು ಅವರ ಪೂರ್ವಿಕರಿಗೆ ಕೊಟ್ಟ ತಮ್ಮ ದೇಶದ ಕಡೆಗೂ, ನೀನು ಆರಿಸಿಕೊಂಡ ಪಟ್ಟಣದ ಕಡೆಗೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿರುವ ಈ ಆಲಯದ ಕಡೆಗೂ ಅವರು ತಿರುಗಿಕೊಂಡು ನಿನಗೆ ಪ್ರಾರ್ಥನೆಯನ್ನು ಮಾಡಿದರೆ,

ಯೆಹೋಷಾಫಾಟನು ಇದನ್ನು ಕೇಳಿ ಹೆದರಿ, ಯೆಹೋವನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡನು. ಯೆಹೂದ್ಯರೆಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿದನು.

¶ ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಇಸ್ರಾಯೇಲರು ಉಪವಾಸವಾಗಿದ್ದು ಗೋಣೀತಟ್ಟನ್ನು ಕಟ್ಟಿಕೊಂಡು ತಮ್ಮ ಮೇಲೆ ಮಣ್ಣುಹಾಕಿಕೊಂಡು ನೆರೆದು ಬಂದರು.

ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.

ಯೆಹೋವನು, “ಇಸ್ರಾಯೇಲೇ, ನೀನು ತಿರುಗಿಕೊಂಡರೆ ನನ್ನ ಬಳಿಗೇ ಬರುವಿ; ನನ್ನ ಕಣ್ಣೆದುರಿನಿಂದ ನಿನ್ನ ಅಸಹ್ಯವಸ್ತುಗಳನ್ನು ತೆಗೆದುಬಿಟ್ಟರೆ, ನೀನು ಇನ್ನು ದಿಕ್ಕು ದೆಸೆಗಳಿಲ್ಲದೆ ನರಳುವುದಿಲ್ಲ.

ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪ ಮತ್ತು ರೋಷಗಳು ಅಪಾರವಾಗಿವೆ” ಎಂದು ಅಪ್ಪಣೆಕೊಟ್ಟನು.

ಅವರು, “ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.

ಕಾನಾನು! ಅದರ ಕೈಯಲ್ಲಿ ಮೋಸದ ತ್ರಾಸು ಇದೆ; ಕಸಕೊಳ್ಳಬೇಕೆಂಬದೇ ಅದರ ಆಶೆ.

¶ ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಗೋಳಾಡಿರಿ! ಯಜ್ಞವೇದಿಯ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದುಕೊಂಡಿರಿ. ಏಕೆಂದರೆ ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ನಿಮ್ಮ ದೇವರ ಆಲಯಕ್ಕೆ ಬಾರದೆ ನಿಂತುಹೋಗಿದೆ.

ಆದಕಾರಣ ನೀನು ನಿನ್ನ ಜನರಿಗೆ ಹೀಗೆ ಹೇಳು, ‘ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನನ್ನ ಕಡೆಗೆ ಪುನಃ ತಿರುಗಿಕೊಳ್ಳಿರಿ’” ಇದು ಸೇನಾಧೀಶ್ವರನಾದ ಯೆಹೋವನ ನುಡಿ, “ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

“ನೀನು ಯಾಜಕರಿಗೂ ದೇಶದ ಸಕಲ ಜನರಿಗೂ ಹೀಗೆ ನುಡಿ, ‘ನೀವು ಈ ಎಪ್ಪತ್ತು ವರ್ಷಗಳಿಂದಲೂ ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡುತ್ತಿದ್ದಾಗ, ಆ ನಿಮ್ಮ ಉಪವಾಸವು ನನಗಾಗಿಯೇ ಮಾಡಿದ್ದೋ?

ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.