ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು.
TSK
TSK · ಯೋವೇಲ 2:18
مراجع Treasury of Scripture Knowledge في ಕನ್ನಡ IRV.
ಆಗ ಆತನ ಮನಸ್ಸು ಇಸ್ರಾಯೇಲರ ಸಂಕಟದ ನಿಮಿತ್ತ ಬಹಳವಾಗಿ ನೊಂದಿತು.
ತಂದೆಯು ಮಕ್ಕಳನ್ನು ಕನಿಕರಿಸುವಂತೆ, ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ.
ಯೆಹೋವನು ಶೂರನಂತೆ ಹೊರಟು, ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು. ಆರ್ಭಟಿಸಿ ಗರ್ಜಿಸಿ ಶತ್ರುಗಳ ಮೇಲೆ ಬಿದ್ದು ತನ್ನ ಪರಾಕ್ರಮವನ್ನು ತೋರ್ಪಡಿಸುವನು.
ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.
ಯೆಹೋವನು ಇಂತೆನ್ನುತ್ತಾನೆ, “ಎಫ್ರಾಯೀಮು ನನಗೆ ಪ್ರಿಯಪುತ್ರ, ಮುದ್ದುಮಗುವಲ್ಲವೇ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ, ಅವನನ್ನು ಕರುಣಿಸುವೆನು.
ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮಾದ ಗತಿಗೆ ಹೇಗೆ ತರಲಿ! ಚೆಬೋಯಿಮಿನಂತೆ ಹೇಗೆ ನಾಶಮಾಡಲಿ! ನನ್ನ ಮನಸ್ಸು ನನ್ನೊಳಗೆ ತಿರುಗಿತು, ಕರುಳು ತೀರಾ ಮರುಗಿತು.
ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ಚೀಯೋನಿಗೆ ಅವಮಾನವಾಯಿತಲ್ಲಾ ಎಂದು ಬಹಳವಾಗಿ ಕುದಿಯುತ್ತೇನೆ. ಅತಿರೋಷಗೊಂಡು ಕುದಿಯುತ್ತೇನೆ.”
ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಪರಿಗಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣಾಸಾಗರನೂ ಮತ್ತು ದಯಾಳುವೂ ಆಗಿದ್ದಾನೆಂದು ತಿಳಿದಿರುವಿರಿ.