TSK

TSK · ಯೋವೇಲ 2:26

مراجع Treasury of Scripture Knowledge في ಕನ್ನಡ IRV.

العودة إلى المقطع

ದೇವರು ನನಗೆ ಕೃಪೆಯನ್ನು ತೋರಿದ್ದರಿಂದ ನನಗೆ ಸಮೃದ್ಧಿಯುಂಟಾಯಿತು. ಆದಕಾರಣ ನಾನು ಸಮರ್ಪಿಸುವ ಉಡುಗೊರೆಯನ್ನು ನೀನು ದಯವಿಟ್ಟು ಅಂಗೀಕರಿಸಬೇಕು” ಎಂದು ಹೇಳಿ ಏಸಾವನನ್ನು ಬಲವಂತ ಮಾಡಿದ್ದರಿಂದ ಅವನು ಆ ಉಡುಗೊರೆಯನ್ನು ತೆಗೆದುಕೊಂಡನು.

ಕಣತುಳಿಸುವ ಕೆಲಸವು ದ್ರಾಕ್ಷಿಯ ಬೆಳೆಯ ಕಾಲದ ತನಕ ಮತ್ತು ದ್ರಾಕ್ಷಿಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು, ನೀವು ಸಮೃದ್ಧಿಯಾಗಿ ಊಟ ಮಾಡುವಿರಿ, ನಿಮ್ಮ ದೇಶದಲ್ಲಿ ಸುರಕ್ಷಿತವಾಗಿ ವಾಸಮಾಡುವಿರಿ.

ತುಂಬಿದ ಮನೆಗಳನ್ನೂ, ನೀವು ತೋಡದ ನೀರುಗುಂಡಿಗಳನ್ನೂ, ನೀವು ಬೆಳಸದ ದ್ರಾಕ್ಷಿತೋಟಗಳನ್ನೂ ಮತ್ತು ಎಣ್ಣೆಮರಗಳನ್ನೂ ಅನುಭವಿಸುತ್ತಾ ತೃಪ್ತರಾಗಿರುವಾಗ,

ಅಲ್ಲಿಯೇ ಆತನ ಸನ್ನಿಧಿಯಲ್ಲಿ ಊಟಮಾಡಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ಮತ್ತು ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.

ನಿಮ್ಮ ದೇವರಾದ ಯೆಹೋವನು ಆಯ್ದುಕೊಳ್ಳುವ ಸ್ಥಳದಲ್ಲೇ ಆತನ ಸನ್ನಿಧಿಯಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲಾ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷದಿಂದಿದ್ದು, ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ಆಳುಗಳೂ ಮತ್ತು ನಿಮ್ಮ ಊರಿನಲ್ಲಿರುವ ಲೇವಿಯರೂ ಇಂಥವುಗಳನ್ನು ಊಟಮಾಡಬೇಕು.

ಅವರು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ, ಸಾರವುಳ್ಳ ಭೂಮಿಯನ್ನೂ, ಸಮಸ್ತ ವಿಧವಾದ ಉತ್ತಮ ವಸ್ತುಗಳಿಂದ ತುಂಬಿದ ಮನೆಗಳನ್ನೂ, ತೋಡಿದ ಬಾವಿಗಳನ್ನೂ, ದ್ರಾಕ್ಷಿತೋಟಗಳನ್ನೂ, ಎಣ್ಣೇಮರಗಳ ತೋಪುಗಳನ್ನೂ, ಹೆಚ್ಚಾದ ಹಣ್ಣಿನ ಮರ ಇವುಗಳನ್ನೂ ವಶಮಾಡಿಕೊಂಡು ಚೆನ್ನಾಗಿ ತಿಂದು, ಕುಡಿದು ತೃಪ್ತರಾಗಿ ಕೊಬ್ಬಿ, ನೀನು ಕೊಟ್ಟ ಸಮೃದ್ಧಿಯಲ್ಲಿ ಆನಂದಿಸುತ್ತಿದ್ದರು.

ದೀನರು ಉಂಡು ತೃಪ್ತರಾಗುವರು; ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. ಅವರ ಅಂತರಾತ್ಮವು ಯಾವಾಗಲು ಚೈತನ್ಯವುಳ್ಳದ್ದಾಗಿರಲಿ.

ಅವರಿಗೆ ವಿಪತ್ಕಾಲದಲ್ಲಿಯೂ ಅಪಮಾನವಾಗುವುದಿಲ್ಲ; ಬರಗಾಲದಲ್ಲಿಯೂ ಅವರಿಗೆ ಕೊರತೆಯಿರುವುದಿಲ್ಲ.

ಶ್ರೇಷ್ಠ ವರಗಳಿಂದ ನಿನ್ನ ಆಶೆಯನ್ನು ಪೂರ್ಣಗೊಳಿಸುತ್ತಾನೆ; ಹದ್ದಿಗೆ ಬರುವಂತೆಯೇ ನಿನಗೆ ಯೌವನವನ್ನು ತಿರುಗಿ ಬರಮಾಡುತ್ತಾನೆ.

ಆಗ ನಮ್ಮ ಬಾಯಿ ಬಲು ನಗೆಯಿಂದಲೂ, ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು, “ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.

ಪ್ರಿಯಳೇ, ವಧುವೇ, ಇಗೋ ನಾ ಬಂದಿರುವೆ ನನ್ನ ತೋಟದೊಳಗೆ, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ, ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ, ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ. ಪ್ರಿಯರೇ ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.

ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಯೆಹೋವನು ಯಾಕೋಬನ ಮನೆತನದ ವಿಷಯವಾಗಿ, “ಯಾಕೋಬ್ಯರು, ಇನ್ನು ನಾಚಿಕೆಪಡುವುದಿಲ್ಲ, ಅವರ ಮುಖವು ಇನ್ನು ಕಳೆಗುಂದುವುದಿಲ್ಲ.

ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಯರು ನಿನಗೆ ಸಾಕುತಾಯಿಯರು ಆಗುವರು. ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳನ್ನು ನೆಕ್ಕುವರು. ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡುವುದಿಲ್ಲ” ಎಂದು ನಿನಗೆ ಗೊತ್ತಾಗುವುದು.

ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ಯರ್ಥ ಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವುದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೆಯದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.

ನಾನು ಉತ್ತರ ದಿಕ್ಕಿನ ಸೈನ್ಯವನ್ನು ನಿಮ್ಮ ಕಡೆಯಿಂದ ದೂರಮಾಡುವೆನು, ಅದನ್ನು ಹಾಳುಬಿದ್ದ ಬಂಜರು ಭೂಮಿಗೂ ಓಡಿಸುವೆನು. ಅದರ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ, ಅದರ ಹಿಂಭಾಗವನ್ನು ಪಶ್ಚಿಮ ಸಮುದ್ರಕ್ಕೂ ತಳ್ಳಿಬಿಡುವೆನು. ಅದರ ದುರ್ವಾಸನೆಯು ಏರುವುದು. ಏಕೆಂದರೆ ಆತನು ಮಹತ್ಕಾರ್ಯಗಳನ್ನು ಮಾಡುತ್ತಾನೆ.

¶ “ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೆ ಈಡಾಗುವವು; ಆಗ ತಮ್ಮ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.

ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವುದು.

ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು. ಧರ್ಮಶಾಸ್ತ್ರದಲ್ಲಿ ಹೀಗೆ ಬರೆಯಲ್ಪಟ್ಟಿದೆ, “ಇಗೋ ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನಲ್ಲಿ ನಂಬಿಕೆಯಿಡುವವನು ಆಶಾಭಂಗಪಡುವುದಿಲ್ಲ” ಎಂಬುದೇ.

ಅವರು ವಿಶ್ವಾಸಿಗಳಿಗೆ ಮದುವೆಯಾಗಬಾರದೆಂತಲೂ, ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ, ಅವರು ಕೃತಜ್ಞತಾಸ್ತುತಿಮಾಡಿ, ತಿನ್ನುವುದಕ್ಕೋಸ್ಕರ ದೇವರು ಉಂಟುಮಾಡಿದ ಆಹಾರವನ್ನು ತಿನ್ನಬಾರದೆಂತಲೂ ಹೇಳುವರು.

ಪ್ರಿಯ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.