TSK

TSK · ಯೋವೇಲ 3:18

مراجع Treasury of Scripture Knowledge في ಕನ್ನಡ IRV.

العودة إلى المقطع

ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.

ಹಾಲು ತುಪ್ಪದಲ್ಲಿ ನನ್ನ ಪಾದಗಳನ್ನು ತೊಳೆಯುತ್ತಿದ್ದೆ, ಬಂಡೆಯು ನನಗೋಸ್ಕರ ಎಣ್ಣೆಯನ್ನು ಪ್ರವಾಹವಾಗಿ ಸುರಿಸುತ್ತಿತ್ತು.

ಗೋಪುರಗಳು ಬಿದ್ದು ಹೋಗುವ ಮಹಾಸಂಹಾರದ ದಿನದಲ್ಲಿ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ, ಎತ್ತರವಾದ ಗುಡ್ಡದಲ್ಲಿಯೂ ತೊರೆಗಳು, ನೀರಿನ ಕಾಲುವೆಗಳು ಹರಿಯುತ್ತಿರುವವು.

ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು.

¶ ಆಮೇಲೆ ಅವನು ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದು ತಂದನು. ಆಹಾ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವಕ್ಕೆ ಹರಿಯುತ್ತಿತ್ತು. (ದೇವಸ್ಥಾನವು ಪೂರ್ವಾಭಿಮುಖವಷ್ಟೆ) ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಯಜ್ಞವೇದಿಯ ದಕ್ಷಿಣದಲ್ಲಿ ಹರಿಯುತ್ತಿತ್ತು.

ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನೂ ಮತ್ತು ಬೆಯೋರನ ಮಗನಾದ ಬಿಳಾಮನು ಹೇಳಿದ ಉತ್ತರವನ್ನೂ ಜ್ಞಾಪಕಮಾಡಿಕೊಳ್ಳಿರಿ. ಯೆಹೋವನ ಧರ್ಮಕಾರ್ಯಗಳು ನಿಮ್ಮ ಗ್ರಹಿಕೆಗೆ ಬರುವ ಹಾಗೆ ನೀವು ಶಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದದ್ದನ್ನೆಲ್ಲಾ ಸ್ಮರಿಸಿಕೊಳ್ಳಿರಿ.

¶ ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,