ಆದರೆ ಯೇಸು ಹೇಳಿದ್ದೇನೆಂದರೆ ‹“ಕಳೆದುಹೋದ ಕುರಿಗಳಂತಿರುವ ಇಸ್ರಾಯೇಲ್ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ”› ಅಂದನು.
TSK
TSK · ಯೋಹಾನನು 1:11
مراجع Treasury of Scripture Knowledge في ಕನ್ನಡ IRV.
‹ಆಗ ಆ ದ್ರಾಕ್ಷಿಯ ತೋಟದ ಧಣಿಯು, ‘ನಾನೇನು ಮಾಡಲಿ? ನನ್ನ ಮುದ್ದುಮಗನನ್ನು ಕಳುಹಿಸುತ್ತೇನೆ, ಒಂದು ವೇಳೆ ಅವನಿಗಾದರೂ ಮರ್ಯಾದೆ ತೋರಿಸಾರು’ ಅಂದುಕೊಂಡನು.›
ನೀವು ಆ ಪ್ರವಾದಿಗಳ ಶಿಷ್ಯರು, ದೇವರು ನಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಗೆ ಬಾಧ್ಯರೂ ಆಗಿದ್ದೀರಿ. ಆತನು ಅಬ್ರಹಾಮನಿಗೆ ‘ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವುದು’ ಎಂದು ಹೇಳಿ ಆ ಒಡಂಬಡಿಕೆಯನ್ನು ಮಾಡಿಕೊಂಡನಲ್ಲಾ.
¶ “ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ.
ಒಬ್ಬರಿಗೊಬ್ಬರು ವಂದನೆಮಾಡಿ ಹಡಗನ್ನು ಹತ್ತಿದೆವು; ಅವರು ಹಿಂತಿರುಗಿ ತಮ್ಮತಮ್ಮ ಮನೆಗಳಿಗೆ ಹೋದರು.
ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.
ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.