TSK

TSK · ಯೋಹಾನನು 1:34

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನು ನನಗೆ, ‘ನನ್ನ ತಂದೆಯೂ, ದೇವರೂ, ಆಶ್ರಯದುರ್ಗವೂ ನೀನೇ’ ಎಂದು ಹೇಳುವನು.

¶ ಆಗ ಸೈತಾನನು ಆತನ ಬಳಿಗೆ ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳಿಗೆ ರೊಟ್ಟಿಯಾಗುವಂತೆ ಅಪ್ಪಣೆಕೊಡು” ಎಂದು ಹೇಳಲು,

ಅವರು, “ದೇವರ ಕುಮಾರನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವುದಕ್ಕಿಂತ ಮೊದಲೇ ನಮ್ಮನ್ನು ದಂಡಿಸುವುದಕ್ಕೆ ಇಲ್ಲಿಗೆ ಬಂದಿರುವೆಯಾ” ಎಂದು ಕೂಗಿದರು.

ಆಗ ಸೀಮೋನ ಪೇತ್ರನು, “ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು” ಎಂದು ಉತ್ತರ ಕೊಟ್ಟನು.

ಮಹಾಯಾಜಕನು ಯೇಸುವಿಗೆ, “ನಿನಗೆ ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದಾನೆ; ನೀನು ದೇವಕುಮಾರನಾದ ಕ್ರಿಸ್ತನಾದರೆ ನಮಗೆ ಹೇಳಬೇಕು” ಅಂದನು.

ಅವನು ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; ‘ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ’” ಎಂದು ಅಣಕಿಸಿ ಮಾತನಾಡುತ್ತಿದ್ದರು.

¶ ದೇವಕುಮಾರನಾದ ಯೇಸು ಕ್ರಿಸ್ತನ ಕುರಿತಾದ ಸುವಾರ್ತೆಯ ಪ್ರಾರಂಭವು.

ಅದಕ್ಕೆ ದೂತನು, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನಾದ ದೇವರ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು.

ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.

¶ ‹“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.›

‹ಎಲ್ಲರೂ ತಂದೆಯನ್ನು ಯಾವ ರೀತಿಯಲ್ಲಿ ಗೌರವಿಸುವರೋ ಅದೇ ರೀತಿಯಲ್ಲಿ ಮಗನನ್ನೂ ಗೌರವಿಸಬೇಕೆಂದು ಹಾಗೆ ಮಾಡಿದ್ದಾನೆ. ಮಗನನ್ನು ಗೌರವಿಸದವನು ಆತನನ್ನು ಕಳುಹಿಸಿದ ತಂದೆಯನ್ನು ಗೌರವಿಸಲಾರನು.›

‹ನಾನೂ ಮತ್ತು ನನ್ನ ತಂದೆಯೂ ಒಂದಾಗಿದ್ದೇವೆ”› ಎಂದನು.

ಆಕೆಯು ಆತನಿಗೆ, “ಹೌದು ಕರ್ತನೇ, ಲೋಕಕ್ಕೆ ಬರಬೇಕಾದ ದೇವಕುಮಾರನಾದ ಕ್ರಿಸ್ತನು ನೀನೇ ಎಂದು ನಾನು ನಂಬಿದ್ದೇನೆ” ಅಂದಳು.

ತೋಮನು ಆತನಿಗೆ, “ನನ್ನ ಕರ್ತನೇ, ನನ್ನ ದೇವರೇ” ಎಂದು ಹೇಳಿದನು.

¶ ದೇವರು ಮುಂಚಿತವಾಗಿ ಪವಿತ್ರ ಗ್ರಂಥಗಳಲ್ಲಿ ತನ್ನ ಪ್ರವಾದಿಗಳ ಮೂಲಕ ತಿಳಿಸಲ್ಪಟ್ಟ ವಾಗ್ದಾನ ಮಾಡಿದ ಈ ಸುವಾರ್ತೆಯು ದೇವರ ಮಗನೂ ನಮ್ಮ ಕರ್ತನೂ ಆಗಿರುವ ಯೇಸು ಕ್ರಿಸ್ತನ ಕುರಿತಾದದ್ದು.

¶ ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ.

ಅವನಿಗೆ ತಂದೆಯಿಲ್ಲ, ತಾಯಿಯಿಲ್ಲ, ವಂಶಾವಳಿಯೂ ಇಲ್ಲ. ಹುಟ್ಟು, ಸಾವು ಇಲ್ಲ. ಆತನು ದೇವರ ಕುಮಾರನಿಗೆ ಹೋಲಿಕೆಯಾಗಿದು, ನಿರಂತರವಾಗಿ ಯಾಜಕನಾಗಿರುವನು.

ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು.

ತಂದೆಯು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ತಿಳಿದಿದ್ದೇವೆ ಮತ್ತು ಅದರ ವಿಷಯದಲ್ಲಿ ನಾವು ಸಾಕ್ಷಿ ಹೇಳುತ್ತೇವೆ.

ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.

¶ ‹“ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ,›‹ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವುದೇನಂದರೆ,›