ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ,
TSK
TSK · ಯೋಹಾನನು 1:41
مراجع Treasury of Scripture Knowledge في ಕನ್ನಡ IRV.
ನನ್ನ ಸೇವಕನಾದ ದಾವೀದನನ್ನು ಕಂಡು, ಪರಿಶುದ್ಧ ತೈಲದಿಂದ ಅವನನ್ನು ಅಭಿಷೇಕಿಸಿದ್ದೇನೆ.
¶ ಆ ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳಿವಳಿಕೆಯನ್ನೂ ಮತ್ತು ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವುದು.
ಇದನ್ನು ತಿಳಿದು ಮನದಟ್ಟುಮಾಡಿಕೋ; ಯೆರೂಸಲೇಮ್ ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹರಡುವ ದಿನದಿಂದ ಅಭಿಷಿಕ್ತನಾದ ಪ್ರಭುವು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರವತ್ತೆರಡು ವಾರ ಇರುವುದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.
ಆಕೆ ಅದೇ ಗಳಿಗೆಯಲ್ಲಿ ಅವರ ಹತ್ತಿರಕ್ಕೆ ಬಂದು ದೇವರಿಂದಾದ ಉಪಕಾರವನ್ನು ನೆನಸಿ ಕೊಂಡಾಡಿದ್ದಲ್ಲದೆ ಯೆರೂಸಲೇಮಿನ ಬಿಡುಗಡೆಯನ್ನು ಹಾರೈಸುತ್ತಿದ್ದವರೆಲ್ಲರ ಸಂಗಡ ಆತನ ವಿಷಯವಾಗಿ ಮಾತನಾಡುವವಳಾದಳು.
ಆಗ ಅಲ್ಲಿ ಯೇಸು ಹೋಗುತ್ತಿರುವುದನ್ನು ನೋಡಿ, ಯೋಹಾನನೂ ಅಗೋ, “ಯಜ್ಞಕ್ಕೆ ದೇವರು ನೇಮಿಸಿರುವ ಕುರಿಮರಿ” ಎಂದು ಹೇಳಿದನು.
¶ ಆ ಹೆಂಗಸು ಆತನಿಗೆ “ಮೆಸ್ಸೀಯನು (ಎಂದರೆ ಕ್ರಿಸ್ತನು) ಬರುತ್ತಾನೆಂದು ನಾನು ಬಲ್ಲೆನು. ಆತನು ಬಂದಾಗ ನಮಗೆ ಎಲ್ಲವನ್ನು ತಿಳಿಸಿಕೊಡುವನು” ಎಂದು ಹೇಳಲು,
ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,
¶ “ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನಮ್ಮ ಮಕ್ಕಳಿಗೋಸ್ಕರ ನೆರವೇರಿಸಿದ್ದಾನೆಂಬ ಶುಭಸಮಾಚಾರವನ್ನು ನಾವು ನಿಮಗೆ ಸಾರುವವರಾಗಿದ್ದೇವೆ. ಆತನು ಯೇಸುವನ್ನು ಮರಣದಿಂದ ಎಬ್ಬಿಸಿದ್ದರಲ್ಲಿ;
ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದ್ದಾಗಿದೆ.