ಯೆಹೋವನು ನನಗೆ ಕುರುಬನು; ಕೊರತೆಪಡೆನು.
TSK
TSK · ಯೋಹಾನನು 10:9
مراجع Treasury of Scripture Knowledge في ಕನ್ನಡ IRV.
ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ, ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು.
ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.
ಮಂದೆಯ ಕುರುಬನು ಸುತ್ತುಮುತ್ತಲು ಚದುರಿ ಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ, ನಾನು ನನ್ನ ಕುರಿಗಳನ್ನು ಹುಡುಕುವೆನು; ಕಾರ್ಮುಗಿಲಿನ ದುರ್ದಿನದಲ್ಲಿ ಚದುರಿಹೋದ ಎಲ್ಲಾ ಸ್ಥಳಗಳಿಂದ ಅವುಗಳನ್ನು ರಕ್ಷಿಸುವೆನು.
¶ ‹“ನಿಮಗೆ›‹ನಿಜನಿಜವಾಗಿ ಹೇಳುತ್ತೇನೆ, ಕುರಿಹಟ್ಟಿಯೊಳಗೆ ಬಾಗಿಲಿನಿಂದ ಬಾರದೆ, ಬೇರೆ ಕಡೆಯಿಂದ ಹತ್ತಿ ಬರುವವನು ಕಳ್ಳನೂ, ದರೋಡೆಕೋರನೂ ಆಗಿದ್ದಾನೆ.›
ಯೇಸು ಅವನಿಗೆ, ‹“ನಾನೇ ಮಾರ್ಗವೂ, ಸತ್ಯವೂ ಮತ್ತು›‹ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.›
ಇದರಿಂದ ಆತನ ಮೂಲಕ ಉಭಯತ್ರರು ಒಂದೇ ಆತ್ಮನಲ್ಲಿ ತಂದೆಯ ಬಳಿಗೆ ಪ್ರವೇಶಿಸಲು ಮಾರ್ಗವಾಯಿತು.